ಶಿವಮೊಗ್ಗ, ಮಾ.18: ಶಿವಮೊಗ್ಗದಲ್ಲಿ ಸೋಮವಾರ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಶಕ್ತಿ’ ಹೇಳಿಕೆಯನ್ನು ಉಲ್ಲೇಖಿಸಿದರು. ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟವು ‘ಶಕ್ತಿ’ ಪರಿಕಲ್ಪನೆಗೆ ಸವಾಲು ಹಾಕಿದೆ. ದೇಶದ ಪ್ರತಿಯೊಬ್ಬ ಮಹಿಳೆ ಮತ್ತು ಶಕ್ತಿ ಆರಾಧಕರು ವಿರೋಧ ಪಕ್ಷದ ಮೈತ್ರಿಗೆ ಜೂನ್ 4 ರಂದು ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ, ನಾವು ಶಕ್ತಿಯ ವಿರುದ್ಧ ಹೋರಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಈ ಹಿಂದೆ ಸಭೆಯೊಂದರಲ್ಲಿ ಹೇಳಿದ್ದರು. ಶಕ್ತಿ ಮೇಲಿನ ದಾಳಿ ಎಂದರೆ ದೇಶದಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಮೇಲಿನ ದಾಳಿ ಎಂದರ್ಥ. ಭಾರತ ಮಾತೆಯ ಶಕ್ತಿಯು ಹೆಚ್ಚುತ್ತಿದೆ. ಇದನ್ನು ಇಂಡಿ ಮೈತ್ರಿಯ ಜನರಿಗೆ ಸಹಿಸಲು ಆಗುತ್ತಿಲ್ಲ. ಅದಕ್ಕೆ ಅವರು ಶಕ್ತಿಯನ್ನು ದ್ವೇಷಿಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು.