ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಬೆಳಗ್ಗೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಈಡಿಗ ಸಂಪ್ರದಾಯದಂತೆ ನಡೆಯಿತು.

ಮೂರು ಬಾರಿ ಕುಶಾಲು ತೋಪು ಸಿಡಿಸಿ ಅಪ್ಪುಗೆ ಗೌರವ ಸಲ್ಲಿಸಲಾಯಿತು. ವಿನಯ್ ರಾಜ್ ಕುಮಾರ್ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು.

ಕಂಠೀರವ ಸ್ಟೇಡಿಯಂಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿ ಪುನೀತ್ ಹಣೆಗೆ ಮುತ್ತಿಟ್ಟು ಅಂತಿಮ ನಮನ ಸಲ್ಲಿಸಿದರು.

4.45ಕ್ಕೆ ಅಂತಿಮ ಯಾತ್ರೆ ಆರಂಭವಾಯಿತು. ಅಂತಿಮ ಯಾತ್ರೆ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.




By
ForthFocus™