Friday, January 16, 2026
Friday, January 16, 2026

ಬೇಡಿಕೆ ಆಧರಿಸಿ ಹೊಸ ವಿದ್ಯಾರ್ಥಿನಿಲಯ ಮಂಜೂರಾತಿಗೆ ಕ್ರಮ

ಬೇಡಿಕೆ ಆಧರಿಸಿ ಹೊಸ ವಿದ್ಯಾರ್ಥಿನಿಲಯ ಮಂಜೂರಾತಿಗೆ ಕ್ರಮ

Date:

ಬೆಳಗಾವಿ, ಡಿ.20: ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಲು ಅನುದಾನ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ ತಂಗಡಗಿ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಸಿದ್ದು ಸವದಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಆಯವ್ಯಯದಲ್ಲಿ ಮಂಜೂರಾಗುವ ಅನುದಾನದ ಲಭ್ಯತೆ ಆಧರಿಸಿ ಅಗತ್ಯವಿರುವ ಕಡೆಗಳಲ್ಲಿ ಹೊಸದಾಗಿ ವಿದ್ಯಾರ್ಥಿ ನಿಲಯಗಳ ಮಂಜೂರಾತಿಗೆ ಕ್ರಮ ವಹಿಸಲಾಗುವುದು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಳೆದ ವರ್ಷದಲ್ಲಿ ರಾಜ್ಯಾದ್ಯಂತ 150 ವಿದ್ಯಾರ್ಥಿ ನಿಲಯಗಳನ್ನು ತೆರೆಯಲಾಗಿದೆ. ಈ ಪೈಕಿ 31 ಜಿಲ್ಲಾ ಕೇಂದ್ರಗಳಲ್ಲಿ ಬಾಲಕ ಹಾಗೂ ಬಾಲಕಿಯರ 62 ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ಉಳಿದಂತೆ ಬೇಡಿಕೆ ಆಧಾರಿಸಿ ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮಾಡಲಾಗಿದೆ.

ರಾಜ್ಯಾದ್ಯಂತ ಇಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ಪದವಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಲು ಹೆಚ್ಚಿನ ಬೇಡಿಕೆಯಿದೆ. ತೇರದಾಳ ಮತಕ್ಷೇತ್ರ ವ್ಯಾಪ್ತಿಯ ಬನಹಟ್ಟಿ, ರಬಕವಿ, ತೇರದಾಳ, ಮಹಾಲಿಂಗಪುರ ಗ್ರಾಮಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂದಿಸಿದ 5 ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಒಟ್ಟು 552 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಂಜೂರಾತಿ ನೀಡಲಾಗಿದೆ. 1,512 ಅರ್ಜಿಗಳು ಸ್ವೀಕೃತವಾಗಿವೆ. 219 ನವೀಕರಣ 235 ಹೊಸ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗಿದೆ. 1,276 ಅರ್ಜಿಗಳು ಬಾಕಿಯಿವೆ. ಮತಕ್ಷೇತ್ರದಲ್ಲಿ ಹೊಸದಾಗಿ ವಿದ್ಯಾರ್ಥಿ ನಿಲಯ ಸ್ಥಾಪಿಸುವ ಪ್ರಸ್ತಾವನೆಗಳು ಆರ್ಥಿಕ ಇಲಾಖೆಯಿಂದ ತಿರಸ್ಕೃತಗೊಂಡಿವೆ. ಆದರೂ ಶಾಸಕರ ಬೇಡಿಕೆ ಅನುಸಾರ ಮುಂದಿನ ಆರ್ಥಿಕ ವರ್ಷದಲ್ಲಿ ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿ ಕುರಿತು ಪರಿಶೀಲಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!