ಬೆಳಗಾವಿ, ಡಿ.16: ರಾಜ್ಯ ಸರ್ಕಾರ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್, ಕಾಮನ್‌ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ 13 ಕ್ರೀಡಾಪಟುಗಳನ್ನು ನೇಮಕಾತಿ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಿಎಂ ಉತ್ತರಿಸಿದರು.
ಪೊಲೀಸ್ ಇಲಾಖೆಯಲ್ಲಿ 70 ಕಾನ್‌ಸ್ಟೇಬಲ್‌ಗಳನ್ನು ನೇರ ನೇಮಕಾತಿ ಹಾಗೂ 14 ಪಿಎಸ್‌ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3, ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬಡ್ಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆಯನ್ನು ಸಹ ನಡೆಸಲಾಗುವುದು ಎಂದು ಸಿಎಂ ಹೇಳಿದರು.




By
ForthFocus™