ಬೆಂಗಳೂರು, ಸೆ.14: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೆಪ್ಟೆಂಬರ್ 22 ರಂದು ನಿಗದಿಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು 28 ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆ ದಿನ ಕೂಡ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಅಭ್ಯರ್ಥಿಗಳ ಮನವಿಯ ಮೇರೆಗೆ ಮತ್ತೆ ಮುಂದೂಡಲು ನಿರ್ಧರಿಸಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವರಾದ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಪಿ.ಎಸ್.ಐ ಪರೀಕ್ಷೆ ಮುಂದೂಡಿಕೆ

ಪಿ.ಎಸ್.ಐ ಪರೀಕ್ಷೆ ಮುಂದೂಡಿಕೆ
Date: