Wednesday, December 4, 2024
Wednesday, December 4, 2024

ಹೃದಯಜ್ಯೋತಿಯಿಂದ ಬಾಳು ‘ಪುನೀತ’

ಹೃದಯಜ್ಯೋತಿಯಿಂದ ಬಾಳು ‘ಪುನೀತ’

Date:

ಬೆಂಗಳೂರು, ನ.29: ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯ ಎರಡನೇ ಹಂತದಲ್ಲಿ ‘ಟೆನೆಕ್ಟ್‌ ಪ್ಲಸ್‌’ ಚುಚ್ಚುಮದ್ದನ್ನು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗಿದೆ. ಈ ಚುಚ್ಚುಮದ್ದು ಒಂದು ಬಾಟಲಿಗೆ ರೂ.30 ಸಾವಿರ ದರ ಇದ್ದು, ಉಚಿತವಾಗಿ ನೀಡಲಾಗುತ್ತಿದೆ.

ಹೃದಯಾಘಾತಕ್ಕೆ ಒಳಗಾದವರಿಗೆ ಇಸಿಜಿ ಪರೀಕ್ಷೆ ನಡೆಸಿ, ಚುಚ್ಚುಮದ್ದು ಅಗತ್ಯವಿದ್ದಲ್ಲಿ ನೀಡಲಾಗುತ್ತಿದೆ. ತೃತೀಯ ಹಂತದ ಚಿಕಿತ್ಸೆಗೆ ‘ಹಬ್‌ ಆಸ್ಪತ್ರೆ’ಗಳಾಗಿ ನೋಂದಾಯಿತವಾಗಿರುವ ಜಯದೇವ ಹೃದ್ರೋಗ ಸಂಸ್ಥೆ ಸೇರಿ ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಇದೇ ಚುಚ್ಚುಮದ್ದುಗಳಿಗೆ ರವಾನಿಸಲಾಗುತ್ತಿದೆ.

ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯಡಿ ಕಳೆದ ಒಂದು ತಿಂಗಳಲ್ಲಿ 348 ಮಂದಿಯ ಜೀವ ರಕ್ಷಿಸಲಾಗಿದೆ. ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. 3 ಲಕ್ಷಕ್ಕೂ ಅಧಿಕ ಮಂದಿಗೆ ಇಸಿಜಿ ಪರೀಕ್ಷೆ ಮಾಡಿಸಲಾಗಿದೆ.

ಹಠಾತ್‌ ಹೃದಯಾಘಾತದ ಸಂದರ್ಭದಲ್ಲಿ ಜನರ ಪ್ರಾಣ ರಕ್ಷಣೆಗಾಗಿ 2023ರ ಮಾರ್ಚ್‌ನಲ್ಲಿ ಮೊದಲ ಹಂತದಲ್ಲಿ ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆ ಜಾರಿ ಮಾಡಲಾಯಿತು. 2024ರ ಮಾರ್ಚ್‌ ತಿಂಗಳಲ್ಲಿ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಯಿತು.

ಈವೆರೆಗೆ ಯೋಜನೆಯಡಿ 5,989 ತೀವ್ರ ಹೃದಯಾಘಾತ ಪ್ರಕರಣಗಳು ಪತ್ತೆಯಾಗಿವೆ. ಅದರಲ್ಲಿ 3 ಸಾವಿರಕ್ಕೂ ಅಧಿಕ ಹೃದಯಾಘಾತದ ರೋಗಿಗಳಿಗೆ ಯಶಸ್ವಿ ಚಿಕಿತ್ಸೆಯನ್ನು ನೀಡಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!