Tuesday, September 29, 2026
Tuesday, September 29, 2026

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಸಾಧನೆ ತಲೆಮಾರುಗಳಿಗೆ ಪ್ರೇರಣೆ

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಸಾಧನೆ ತಲೆಮಾರುಗಳಿಗೆ ಪ್ರೇರಣೆ

Date:

ಬೆಂಗಳೂರು, ಜ.28: ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರು 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವುದು ಇಡೀ ನಾಡು ಹೆಮ್ಮೆಪಡುವಂತದ್ದು. ಸರಿಸುಮಾರು 7 ದಶಕಗಳ ಕಾಲ ತೊಗಲುಗೊಂಬೆಯಾಟವನ್ನೇ ಬದುಕಿನ ಹಾದಿಯಾಗಿಸಿಕೊಂಡು, ನೆಲದ ಕಲೆಯನ್ನು ದೇಶ – ವಿದೇಶಗಳಿಗೂ ಪರಿಚಯಿಸಿದ ಹಿರಿಯ ಜೀವ ಭೀಮವ್ವನವರು ಈ ಗೌರವಕ್ಕೆ ಅತ್ಯಂತ ಅರ್ಹರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗ್ರಾಮೀಣ ಕಲೆ, ಜಾನಪದ ಸಂಸ್ಕೃತಿಗಳು ಇತಿಹಾಸದ ಪುಟ ಸೇರುತ್ತಿರುವ ಇಂದಿನ ಆಧುನಿಕ ಕಾಲಘಟ್ಟದಲ್ಲಿ ಕಲಾಸೇವೆಗೆ ಬದುಕು ಸಮರ್ಪಿಸಿ, ಅದನ್ನು ಜನಮಾನಸದಲ್ಲಿ ಉಳಿಯುವಂತೆ ಮಾಡುತ್ತಿರುವ ಭೀಮವ್ವನವರ ಸೇವೆ – ಸಾಧನೆ ತಲೆಮಾರುಗಳಿಗೆ ಪ್ರೇರಣೆ ಎಂದು ಸಿಎಂ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಗೊಳ್ಳಿ ರಾಯಣ್ಣ ಪುರಸ್ಕಾರಕ್ಕೆ ಸಂಘಟಕ, ರಂಗಕರ್ಮಿ ರವಿರಾಜ್ ಎಚ್. ಪಿ. ಆಯ್ಕೆ

ಉಡುಪಿ, ಸೆ.29: ಹತ್ತು ಹಲವು ಸಂಘ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಸಂಘಟಕ, ರಂಗಕರ್ಮಿ,...

ದೇಶದ ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಪ್ರಮುಖವಾದುದು: ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್.ಪಾಟೀಲ

ಧಾರವಾಡ, ಸೆ.29: ರೈತರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ ದೊರೆಯಬೇಕು. ವಿಶ್ವಸಂಸ್ಥೆಯು...

ದಾರಿದೀಪ ಹಾಗೂ ಹೈಮಾಸ್ಟ್ ಲೈಟ್‌ಗಳ ಸಮಸ್ಯೆ ಬಗೆಹರಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮನವಿ

ಮಣಿಪಾಲ, ಸೆ.29: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...
error: Content is protected !!