ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದ ಅಪಾರ ನಷ್ಟ ಉಂಟಾಗಿದೆ. ಒಟ್ಟು 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟು ಮಾತ್ರವಲ್ಲದೇ 5 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.
658 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, 8,495 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ರಾಜ್ಯದಲ್ಲಿ ಕನಿಷ್ಠ 191 ಜಾನುವಾರುಗಳು ಮೃತಪಟ್ಟಿವೆ.