ಬೆಂಗಳೂರು: ಮಳೆ ತರಿಸುವಂತಹ ಮೋಡಗಳ ರಚನಾ ವ್ಯವಸ್ಥೆಯು ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣವಾಗುತ್ತಿದ್ದು, ತಮಿಳುನಾಡಿನಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಅಕ್ಟೋಬರ್ 29 ರಿಂದ ಈಶಾನ್ಯ ಮಳೆ ಮಾರುತಗಳ ಆಗಮನವಾಗಲಿದ್ದು, ಈ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಮತ್ತೆ ವರುಣನ ಆರ್ಭಟ ಉಂಟಾಗುವ ಎಲ್ಲ ಸಾಧ್ಯತೆಗಳು ಇವೆ ಎಂಬುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ. ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ತುಸು ಹೆಚ್ಚೇ ಮಳೆ ಬಿದ್ದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
‘ಫಾಲ್ಸ್ ವಿಂಟರ್’: ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಚಳಿಯ ವಾತಾವರಣ ನಿರ್ಮಾಣವಾಗಿದೆ. ಇದು ಚಳಿಗಾಲದ ಆರಂಭವಲ್ಲ, ಬದಲಿಗೆ ಒಂದು ರೀತಿಯ ‘ಫಾಲ್ಸ್ ವಿಂಟರ್’ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ತೀವ್ರ ಚಳಿ: ಅಕ್ಟೋಬರ್ 25 ರಂದು ಬೆಂಗಳೂರಿನಲ್ಲಿ ತಾಪಮಾನವು 15.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ.