ಬೆಂಗಳೂರು, ಮೇ 20: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಮೇ 28ರವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಮೇ 24ರವರೆಗೆ ಕೆಲವೆಡೆ ತುಂತುರು ಮಳೆ, ಇನ್ನು ಕೆಲವೆಡೆ ಗುಡುಗು, ಮಿಂಚು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಂತರ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
