ಬೆಂಗಳೂರು, ಫೆ.11: ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ, ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನನ್ನ ಸವಾಲು ಕೂಡಾ ಹೌದು. ಬಡವರ ಕಷ್ಟ ಕಡಿಮೆ ಮಾಡುವ, ಕಣ್ಣೀರು ಒರೆಸುವ ಕೆಲಸವೇ ನಿಜವಾದ ದೈವ ಭಕ್ತಿ ಎಂದು ತಿಳಿದುಕೊಂಡವನು ನಾನು. ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿ ಎಷ್ಟು ಬಾರಿ ರಾಮನಾಮ ಹೇಳಿದರೂ ಅದು ವ್ಯರ್ಥ. ಬಡವರಿಗೆ ಅನ್ನವನ್ನೂ ನೀಡದೆ ದೇವರಿಗೆ ನೈವೇಧ್ಯ ನೀಡಿ ಏನು ಫಲ? ಬಡವರಿಗೆ ಮನೆ ಕಟ್ಟಿಕೊಡದೆ ದೇವರಿಗೆ ಗುಡಿ ಕಟ್ಟಿ ಏನು ಫಲ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರಿಗೆ ಯಾವ ರಾಮನ ದಯೆಯೂ ಇರಲಾರದು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದವೂ ಇರಲಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಗೃಹಸಚಿವ ಅಮಿತ್ ಶಾ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ
ಗೃಹಸಚಿವ ಅಮಿತ್ ಶಾ ಜೊತೆ ಬಹಿರಂಗ ಚರ್ಚೆಗೆ ಸಿದ್ಧ: ಮುಖ್ಯಮಂತ್ರಿ ಸಿದ್ಧರಾಮಯ್ಯ
Date: