Wednesday, October 23, 2024
Wednesday, October 23, 2024

ಮೇಜರ್ ಧ್ಯಾನ್ ಚಂದ್‌ ಸಾಧನೆ ಮಾದರಿ: ಡಾ.ಕೇಶವಮೂರ್ತಿ

ಮೇಜರ್ ಧ್ಯಾನ್ ಚಂದ್‌ ಸಾಧನೆ ಮಾದರಿ: ಡಾ.ಕೇಶವಮೂರ್ತಿ

Date:

ಮಂಗಳೂರು, ಆ.29: ಮೇಜರ್ ಧ್ಯಾನ್ ಚಂದ್ ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಹಾಕಿ ಪಟು ಅವರ ಸಾಧನೆ ಇತರರಿಗೂ ಮಾದರಿ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಕೇಶವಮೂರ್ತಿ ಟಿ ಹೇಳಿದರು. ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ- ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಐ.ಕ್ಯೂ.ಎ.ಸಿಯ ವತಿಯಿಂದ ಗುರುವಾರ ರಾಷ್ಟೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮೇಜರ್ ಧ್ಯಾನ್ ಚಂದ್ ನಂತಹ ಶ್ರೇಷ್ಠ ಹಾಕಿ ಪಟುವಿಗೆ ಚಾಂದ್ ಬಿರುದು ಬಂದ ಹಿನ್ನಲೆ, ಅವರ ಕ್ರೀಡಾ ಸಾಧನೆಗಳ ಬಗ್ಗೆ ಉಪನ್ಯಾಸವನ್ನು ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ. ಜಯಕರ ಭಂಡಾರಿ ಎಂ ರಾಷ್ಟೀಯ ಕ್ರೀಡಾ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿ ಕ್ಷೇಮಪಾಲಕರಾದ ಡಾ. ಸುಧಾಕರನ್ ಟಿ., ಸಂಚಾಲಕರಾದ ದೇವಿಪ್ರಸಾದ್, ಗಣಕವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ರಘುಪತಿ ಉಪಸ್ಥಿತರಿದ್ದರು. ಮುಖ್ಯಸ್ಥರು ಹಾಗೂ ಸಂಯೋಜಕರಾದ ಶುಭ ಕೆ ಹೆಚ್ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಅಪರ್ಣ ಆಳ್ವ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!