ಮಂಗಳೂರು, ಆ.31: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾ.ಸೇ.ಯೋ ಹಾಗೂ ರೆಡ್ ಕ್ರಾಸ್ ಘಟಕಗಳ ಜಂಟಿ ಆಯೋಜನೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮೂಡಬಿದ್ರೆ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶ್ರೀಧರ್ ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಸಾಮಾಜಿಕ ಅರಣ್ಯವನ್ನು ಹೆಚ್ಚಿಸುವ ಜವಾಬ್ದಾರಿ ಯುವಜನತೆಯ ಮೇಲಿದೆ. ಪ್ರತಿಯೊಬ್ಬರು ಗಿಡಮರಗಳಿಗೆ ಹೃದಯದಲ್ಲಿ ಸ್ಥಾನ ನೀಡಿದರೆ, ಭೂಮಿಯ ಮೇಲೆ ಸಾಕಷ್ಟು ಸ್ಥಳಾವಕಾಶವಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಸಾಮಾಜಿಕ ಪ್ರಜ್ಞೆ, ಜಾಗೃತಿ ಮೂಡಿಸಲು ಕರೆ ನೀಡಿದರು.
ಕಾಲೇಜಿನ ಆವರಣದಲ್ಲಿ ವಿವಿಧ ಹಣ್ಣುಗಳ ಗಿಡನೆಡುವ ಕಾರ‍್ಯಕ್ರಮದಲ್ಲಿ, ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ, ಅಧ್ಯಕ್ಷತೆ ವಹಿಸಿದ್ದರು. ರಾ.ಸೇ.ಯೋಜನೆಯ ಯೋಜನಾಧಿಕಾರಿಗಳು, ಯೂತ್ ರೆಡ್ ಕ್ರಾಸ್ ನ ಸಂಯೊಜಕರುಗಳು, ಸ್ವಯಂಸೇವಕರು ಭಾಗವಹಿಸಿದ್ದರು.