ಮಂಗಳೂರು, ಏ.10: ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಘಟಕದ ಜನಾಕ್ರೋಶ ಯಾತ್ರೆ ಮಂಗಳೂರಿನಲ್ಲಿ ನಡೆಯಿತು. ಯತ್ರೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕುಡಿಯುವ ನೀರಿನಿಂದಿಡಿದು ವಿದ್ಯುತ್, ಬಸ್, ಹಾಲು, ಡೀಸೆಲ್ ಸೇರಿದಂತೆ ಪ್ರತಿಯೊಂದು ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಸಿ ಸರ್ಕಾರದ ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಜನರಿಂದಲೇ ವಸೂಲಿಗಿಳಿದಿದೆ. ಅಲ್ಲದೇ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಸರ್ಕಾರದ ಕಾಮಗಾರಿಗಳಲ್ಲಿ ಮೀಸಲಾತಿ ನೀಡಿ, ಹಿಂದೂ ಸಮುದಾಯಕ್ಕೆ ದ್ರೋಹ ಬಗೆದಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸುವ ಸಂಕಲ್ಪ ಮಾಡಬೇಕಿದೆ ಎಂದರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಶ್ರೀರಾಮುಲು, ಮಾಜಿ ಸಚಿವ ಎಸ್.ಅಂಗಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಪ್ರೀತಮ್ ಗೌಡ, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಂಸದರಾದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಕಿಶೋರ್, ರೈತ ಮೋರ್ಚಾ ರಾಜ್ಯ ಅಧ್ಯಕ್ಷರಾದ ಎಂ.ಎಸ್.ಪಾಟೀಲ್ ನಡಹಳ್ಳಿ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಂಜಾ, ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ, ಉಮಾನಾಥ್ ಕೋಟ್ಯಾನ್, ಡಾ. ವೈ ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.




By
ForthFocus™