Sunday, April 26, 2026
Sunday, April 26, 2026

ರಥಬೀದಿ ಸರಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ಬಿ.ಸಿ.ಎ. ಮತ್ತು ಬಿ.ಕಾಂ. ಪ್ರವೇಶಕ್ಕೆ ಅರ್ಜಿ ಅಹ್ವಾನ

ರಥಬೀದಿ ಸರಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ಬಿ.ಸಿ.ಎ. ಮತ್ತು ಬಿ.ಕಾಂ. ಪ್ರವೇಶಕ್ಕೆ ಅರ್ಜಿ ಅಹ್ವಾನ

Date:

ಮಂಗಳೂರು, ಜೂ.10: ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜು, ರಥಬೀದಿ, ಮಂಗಳೂರು ಇಲ್ಲಿ ಬಿ.ಸಿ.ಎ. ಮತ್ತು ಬಿ.ಕಾಂ. ಪದವಿ ತರಗತಿಗಳಿಗೆ ಪ್ರವೇಶ ಲಭ್ಯವಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಿರುವ ಈ ಕಾಲೇಜು ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸುಸಜ್ಜಿತ ಕಂಪ್ಯೂಟರ್ ಪ್ರಯೋಗಾಲಯ ಹಾಗೂ ಇತರ ಸೌಲಭ್ಯಗಳನ್ನು ಹೊಂದಿರುತ್ತದೆ. ಬಿ.ಸಿ.ಎ. ಪದವಿಯು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಐ) ಮಾನ್ಯತೆ ಪಡೆದಿರುತ್ತದೆ. ತರಗತಿಗಳು ಪ್ರತಿ ದಿನ ಸಂಜೆ 5 ರಿಂದ ರಾತ್ರಿ 9ರ ತನಕ ನಡೆಯುತ್ತಿದೆ. ಸರಕಾರ ನಿಗದಿಪಡಿಸಿದ ಶುಲ್ಕದ ಹೊರತು ಇತರ ಯಾವುದೇ ಶುಲ್ಕಗಳು ಇರುವುದಿಲ್ಲ.

ಪದವಿಪೂರ್ವ ಶಿಕ್ಷಣದ ನಂತರ ಉದ್ಯೋಗ ನಿರತರಾಗಿರುವ ಮತ್ತು ಇತರ ಕಾರಣಗಳಿಂದ ಪದವಿ ಶಿಕ್ಷಣ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಪದವಿ ಪಡೆಯಲು ಇದು ಉತ್ತಮ ಅವಕಾಶವಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ 2025-26ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿಗೆ ಕಾಲೇಜಿನ ಕಚೇರಿಯನ್ನು ವೈಯಕ್ತಿಕವಾಗಿ ಅಥವಾ ದೂರವಾಣಿ ಸಂಖ್ಯೆ 0824-2494109 ಮೂಲಕ (ಬೆಳಿಗ್ಗೆ 10 ರಿಂದ ಸಂಜೆ 5 ರ ತನಕ) ಸಂಪರ್ಕಿಸಬಹುದಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟ್ರಂಪ್ ಭೋಜನಕೂಟದಲ್ಲಿ ಗುಂಡು ಹಾರಾಟ; ಅಮೆರಿಕ ಅಧ್ಯಕ್ಷ ಸ್ಥಳಾಂತರ

ಯು.ಬಿ.ಎನ್.ಡಿ., ಏ.26: ವಾಷಿಂಗ್ಟನ್ ಹಿಲ್ಟನ್‌ನ ಲಾಬಿಯಲ್ಲಿ ಶಂಕಿತ ಗುಂಡು ಹಾರಾಟದ ವರದಿಯಾದ...

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಪರವಾನಗಿಯನ್ನು ದ್ದುಗೊಳಿಸಿದ ಆರ್.ಬಿ.ಐ

ನವದೆಹಲಿ, ಏ.26: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಲಾದ ಬ್ಯಾಂಕಿಂಗ್ ಪರವಾನಗಿಯನ್ನು...

ನೀತಿ ಆಯೋಗದ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಲಾಹಿರಿ ನೇಮಕ

ನವದೆಹಲಿ, ಏ.26: ಸರ್ಕಾರವು ನೀತಿ ಆಯೋಗವನ್ನು ಪುನರ್ರಚಿಸಿದೆ. ಅರ್ಥಶಾಸ್ತ್ರಜ್ಞ ಅಶೋಕ್ ಕುಮಾರ್...
error: Content is protected !!