ಬೆಂಗಳೂರು, ಫೆ.6: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದ್ದರ ಪರಿಣಾಮವಾಗಿ ಪ್ರತಿ ನಿತ್ಯ 80 ರಿಂದ 85 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ಹೈನುಗಾರರಿಗೆ ನೀಡಬೇಕಾಗಿದ್ದ ರೂ. 716 ಕೋಟಿ ಪ್ರೋತ್ಸಾಹಧನ ನೀಡದೇ ಇರುವುದರ ಪರಿಣಾಮವಾಗಿ ರಾಜ್ಯದಲ್ಲಿ ಇಂದು ಹಾಲಿನ ಉತ್ಪಾದನೆಯಲ್ಲಿ ಕುಂಠಿತವಾಗಿ 10 ಲಕ್ಷ ಲೀಟರ್‌ನಷ್ಟು ಹಾಲು ಸಂಗ್ರಹಣೆ ಕಡಿಮೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ನೈಜ ಕಾಳಜಿ ಇದ್ದರೆ ಬಾಕಿ ಉಳಿಸಿದ ಹೈನುಗಾರರ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಹೈನುಗಾರರ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಿ: ಬಿ.ವೈ. ವಿಜಯೇಂದ್ರ
ಹೈನುಗಾರರ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಿ: ಬಿ.ವೈ. ವಿಜಯೇಂದ್ರ
Date: