Sunday, January 19, 2025
Sunday, January 19, 2025

ರೇಣುಕಾಸ್ವಾಮಿ ಕೊಲೆ ಪ್ರಕರಣ; ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ; ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಂಗಳೂರು, ಜೂ.19: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರಿಂದ, ಶಾಸಕರಿಂದ ಒತ್ತಡವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಗ್ಯಾಂಗ್ ಮೇಲೆ ತೀವ್ರ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿಯವರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ನನ್ನ ಮೇಲೆ ಒತ್ತಡ ಹಾಕಿದರೆ ಅವೆಲ್ಲವನ್ನೂ ನಾನು ಕೇಳುವುದೂ ಇಲ್ಲ. ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಸ್.‌ಪಿ.ಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದೆ ಈವರೆಗೂ ಬಂದೇ ಇಲ್ಲ. ಇದಕ್ಕೆ ಸಂಬಂಧಪಟ್ಟಂತೆ ಈಗ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ಕಲ್ಪಿತ ವರದಿಗಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!