Tuesday, September 15, 2026
Tuesday, September 15, 2026

ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ಮಹಾ ಸಿಎಂಗೆ ವಿನಂತಿ

ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ಮಹಾ ಸಿಎಂಗೆ ವಿನಂತಿ

Date:

ಮುಂಬಯಿ, ಜು.13: ಮಹಾರಾಷ್ಟ್ರದಾದ್ಯಂತ ಅಡಿಕೆ ಸಾಗಣೆ ವಾಹನಗಳನ್ನು ಪ್ರಯೋಗಾಲಯದ ತಪಾಸಣೆಗಾಗಿ ದಿನಗಟ್ಟಲೆ ತಡೆಹಿಡಿಯಲಾಗಿದೆ. ಇದರಿಂದಾಗಿ ಉತ್ತರ ಭಾರತದ ಮಾರುಕಟ್ಟೆಗಳಿಗೆ ತೆರಳಬೇಕಿದ್ದ ನಮ್ಮ ರೈತರ ಅಡಿಕೆ ಬೆಳೆ ಹಾನಿಗೊಳಗಾಗಿ, ಬೆಳೆಗಾರರು ತೀವ್ರ ಆರ್ಥಿಕ ನಷ್ಟ ಎದುರಿಸುವಂತಾಗಿದೆ.

ಕರ್ನಾಟಕದ ಪ್ರಮುಖ ಅಡಿಕೆ ಸಹಕಾರಿ ಸಂಸ್ಥೆಗಳಾದ ಕ್ಯಾಂಪ್ಕೋ, ಮಾಮ್ಕೋಸ್, ಟುಮ್ಕೋಸ್ ಹಾಗೂ ರಾಜ್ಯ ಅಡಿಕೆ ಸಹಕಾರಿ ಮಹಾಮಂಡಳದ ನಿಯೋಗ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿಯವರ ನೇತೃತ್ವದಲ್ಲಿ ಭೇಟಿಯಾಗಿ ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ವಿನಂತಿಸಿದೆ.

ರೈತರ ಹಿತರಕ್ಷಣೆಗೆ ಧಾವಿಸಿ, ಈ ಗಂಭೀರ ಸಮಸ್ಯೆಯ ಕುರಿತು ತಕ್ಷಣವೇ ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಅವರೊಂದಿಗೆ ನಿಯೋಗ ಚರ್ಚೆ ನಡೆಸಿತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಫಡ್ನವೀಸ್ ಅವರು, ತಡೆಹಿಡಿಯಲಾಗಿರುವ ಅಡಿಕೆ ಸರಕನ್ನು ತಕ್ಷಣವೇ ಬಿಡುಗಡೆ ಮಾಡಲು ಮತ್ತು ಮುಂದಿನ ದಿನಗಳಲ್ಲಿ ಇಂತಹ ಸಾಗಣೆಗೆ ಯಾವುದೇ ಅಡ್ಡಿಯಾಗದಂತೆ ಅಗತ್ಯವಿರುವ ಎಲ್ಲಾ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.

ನಿಯೋಗದಲ್ಲಿದ್ದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡುತ್ತಾ, ಅಡಿಕೆ ಬೆಳೆಗಾರರ ಬೆನ್ನಿಗೆ ಸದಾ ನಿಲ್ಲುವ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಹಾಗೂ ಕರಾವಳಿ ಮಲೆನಾಡು ರೈತರ ಪಾಲಿಗೆ ನೆರವಾದ ಸನ್ಮಾನ್ಯ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರಿಗೆ ರಾಜ್ಯದ ಸಮಸ್ತ ರೈತ ಬಾಂಧವರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ. ಸಂಸದರಾದ ಬಿ. ವೈ. ರಾಘವೇಂದ್ರ, ಮಾಜಿ ಸಚಿವರು ಹಾಗೂ ಶಾಸಕರಾದ‌ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್‌ ನಾಯ್ಕ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜೀವದ ಹಂಗು ತೊರೆದು ಅರಣ್ಯವನ್ನು ಕಾಪಾಡಿದ ವೀರರ ತ್ಯಾಗ ಚಿರಸ್ಮರಣೀಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.14: ಬೆಂಗಳೂರಿನ ಅರಣ್ಯ ಭವನದಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ...

ಬಿಜೆಪಿ ಮಾಜಿ ಶಾಸಕ ನೆ. ಲ. ನರೇಂದ್ರ ಬಾಬು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಸೆ.14: ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಕಾಪು: ಚೆಸ್ ಪಂದ್ಯಾಟ ಉದ್ಘಾಟನೆ

ಕಾಪು, ಸೆ.14: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ...

ಬಿ.ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.10: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...
error: Content is protected !!