ಬೆಂಗಳೂರು, ಆ.22: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಸರ್ಕಾರ ಪ್ರತಿ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆ ಮಾಡಲು ನಿರ್ಧರಿಸಿದೆ. ವಿಜ್ಞಾನಿಗಳು ಹಾಗೂ ಶಿಕ್ಷಕರು ಇದಕ್ಕೆ ಪೂರಕವಾದ ಕಾರ್ಯಕ್ರಮ ಆಯೋಜಿಸಿ ಪ್ರೋತ್ಸಾಹಿಸಬೇಕು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ 830 ವಸತಿ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಟೆಲಿಸ್ಕೋಪ್ ವಿತರಿಸುವ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನಲ್ಲಿ ದೇಶದ ಅತಿ ದೊಡ್ಡ ವಿಜ್ಞಾನ ಗ್ಯಾಲರಿ ರೂ. 100 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅರಿವು ಮೂಡಿಸುವ ಮೂಲಕ ಹೊಸ ಸಂಶೋಧನೆ ಮಾಡಬೇಕು. ಭವಿಷ್ಯದಲ್ಲಿ ದೇಶಕ್ಕೆ ಕೊಡುಗೆ ನೀಡುವ ಆಶಾಭಾವನೆ ಇದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.