Home ಸುದ್ಧಿಗಳು ರಾಜ್ಯ ರಾಜ್ಯದ ಹಲವೆಡೆ ತಾಪಮಾನ ಕುಸಿತ

ರಾಜ್ಯದ ಹಲವೆಡೆ ತಾಪಮಾನ ಕುಸಿತ

262
0

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳ ತಾಪಾಮಾನದಲ್ಲಿ ಭಾರೀ ಕುಸಿತವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಚಳಿ ಹೆಚ್ಚಳವಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲಚೆಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದ್ದು, ರಾಜ್ಯದ ಶೇ. 73 ರಷ್ಟು ಪ್ರದೇಶಗಳಲ್ಲಿ 16 ರಿಂದ 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಕಂಡುಬಂದಿದೆ. ಬೀದರ್‌ನಲ್ಲಿ 11 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿರುವುದು ರಾಜ್ಯದಲ್ಲೇ ಕನಿಷ್ಠ ತಾಪಮಾನವಾಗಿದೆ.

ಮೈಸೂರು, ಮಂಡ್ಯ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್‌, ಕಲಬುರಗಿ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮತ್ತು ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಚಳಿಯ ವಾತಾವರಣ ಕಂಡುಬಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.