ಬೆಂಗಳೂರು, ಮೇ 21: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನಗತ್ಯ ಮತ್ತು ಕ್ಷುಲ್ಲಕ ದಾವೆಗಳನ್ನು ಕಡಿಮೆ ಮಾಡುವ ಮೂಲಕ ಬಾಕಿ ಇರುವ ದಾವೆಗಳನ್ನು ಕಡಿಮೆ ಮಾಡುವುದು ಮತ್ತು ಯುವ ಕಾನೂನು ಅಧಿಕಾರಿಗಳನ್ನು ನ್ಯಾಯಾಲಯಕ್ಕೆ ಸಹಾಯ ಮಾಡುವ ಮೂಲಕ ಕಾನೂನು ಇಲಾಖೆಯನ್ನು ಬಲಪಡಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹೇಳಿದರು. ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು, ನಿವೃತ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರ.
ಸೆಪ್ಟೆಂಬರ್ 13. 1975 ರಲ್ಲಿ ಜನಿಸಿದ ಅವರು, ತಮ್ಮ ಕಾನೂನು ಪದವಿಯನ್ನು ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಬೆಂಗಳೂರು ಇಲ್ಲಿ ಪಡೆದರು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳಲ್ಲಿ ಹಲವಾರು ಹೈ ಪ್ರೊಫೈಲ್ ಕೇಸುಗಳನ್ನು ಸಮರ್ಥವಾಗಿ ನಿಭಾಯಿಸಿರುವ ಇವರು ಕಾನೂನು ಕ್ಷೇತ್ರದಲ್ಲಿ ಹಲವು ಸಾಧನೆಗಳನ್ನು ಮಾಡಿದ್ದಾರೆ.