ಶಿವಮೊಗ್ಗ, ಜೂ.19: ಶಿಕಾರಿಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಬುಧವಾರ ಶಾಸಕ ಬಿ.ವೈ. ವಿಜಯೇಂದ್ರ ಹಿರಿಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದರು. ಎಲ್ಲೆಡೆ ಮಳೆ ಆರಂಭವಾಗಿದ್ದು ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿದ್ದು, ಡೆಂಗ್ಯೂ ಹಾಗೂ ಇತರ ಸಾಂಕ್ರಾಮಿಕ ರೋಗಗಳು ಹರಡದಂತೆ ಕೂಡಲೇ ಹತೋಟಿಗೆ ತರುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಸ್ಪತ್ರೆಯ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ವಿನಾಕಾರಣ ಜಿಲ್ಲಾಸ್ಪತ್ರೆಗೆ ಶಿಫಾರಸ್ಸು ಮಾಡುವುದನ್ನು ನಿಲ್ಲಿಸಿ, ದೂರದ ಗ್ರಾಮೀಣ ಪ್ರದೇಶಗಳಿಂದ ಬರುವ ರೋಗಿಗಳನ್ನು ತಕ್ಷಣ ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡುವಂತೆ ಕ್ರಮ ವಹಿಸುವುದೂ ಸೇರಿದಂತೆ ಆಸ್ಪತ್ರೆಯಲ್ಲಿ ಲಭ್ಯವಿರುವ ಜನೌಷಧ ಸೌಲಭ್ಯಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಅರುಣ್, ವೈದ್ಯಾಧಿಕಾರಿಗಳಾದ ಡಾ. ಸುರೇಶ್, ಡಾ. ಶ್ರೀನಿವಾಸ್, ಡಾ. ಮಾರುತಿ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು.
ಶಿಕಾರಿಪುರ: ಡೆಂಗ್ಯೂ ಹರಡದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಶಾಸಕ ವಿಜಯೇಂದ್ರ ಸೂಚನೆ
ಶಿಕಾರಿಪುರ: ಡೆಂಗ್ಯೂ ಹರಡದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಶಾಸಕ ವಿಜಯೇಂದ್ರ ಸೂಚನೆ
Date: