ಬೆಂಗಳೂರು, ಏ.3: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಎನ್.ಡಿ.ಎ ಅಭ್ಯರ್ಥಿಯಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬುಧವಾರ ನಾಮಪತ್ರ ಸಲ್ಲಿಸಿದರು. ಶಾಸಕರಾದ ಗೋಪಾಲಯ್ಯ, ಎಸ್. ಮುನಿರಾಜು, ಭೈರತಿ ಬಸವರಾಜು, ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.