Saturday, January 18, 2025
Saturday, January 18, 2025

ಶಾಲಾ ಶುಲ್ಕ ವಿಚಾರ: ಗೊಂದಲ ನಿವಾರಿಸುವಂತೆ ಮುಖ್ಯಮಂತ್ರಿಗೆ ಸಿದ್ಧರಾಮಯ್ಯ ಪತ್ರ

ಶಾಲಾ ಶುಲ್ಕ ವಿಚಾರ: ಗೊಂದಲ ನಿವಾರಿಸುವಂತೆ ಮುಖ್ಯಮಂತ್ರಿಗೆ ಸಿದ್ಧರಾಮಯ್ಯ ಪತ್ರ

Date:

ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರಿಗೆ ಪತ್ರ ಬರೆದಿರುವ ಅವರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಸಂಬಳ ನೀಡಬೇಕು. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು.

ಕೊರೊನಾ ಕಾರಣದಿಂದಾಗಿ ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಲೇ ಇಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಶಿಕ್ಷಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯ್ತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ.

ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ ಎಂದು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ.

ಜುಲೈ 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ದಿನಾಂಕ 15-6-2021 ರಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ.

ಕಳೆದ ವರ್ಷ ಶಾಲೆಗೆ ಮಕ್ಕಳು ಕಾಲಿಡಲು ಸಾಧ್ಯವಾಗದಿದ್ದರೂ ಬಸ್ ಶುಲ್ಕವನ್ನೂ ವಸೂಲಿ ಮಾಡಿದ ಶಾಲೆಗಳೂ ಇವೆ. ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಸಾಲದ್ದಕ್ಕೆ ಸರ್ಕಾರ ಶೇ 30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು.

ಸಾರ್ವತ್ರಿಕವಾಗಿ ಎಲ್ಲಾ ಖಾಸಗಿ ಶಾಲೆಗಳಿಗೂ ಒಂದೇ ಪ್ರಮಾಣದ ಶುಲ್ಕ ನಿಗಧಿ ಮಾಡುವ ಬದಲಿಗೆ ಈ ವಿಚಾರದಲ್ಲಿ ಪೋಷಕರ ಸಂಘಗಳ ಜತೆ ಚರ್ಚಿಸಿ ವೈಜ್ಞಾನಿಕವಾದ ಮಾನದಂಡದಲ್ಲಿ ಶುಲ್ಕದ ಪ್ರಮಾಣವನ್ನು ನಿಗಧಿ ಮಾಡಬೇಕು. ಕೊರೋನಾ ಆರ್ಭಟ ಶುರುವಾಗುವುದಕ್ಕೂ ಹಿಂದಿನ ಸಾಲಿನಲ್ಲಿ ಶಾಲೆಗಳು ವಿಧಿಸಿದ್ದ ಶುಲ್ಕದ ಆಧಾರದಲ್ಲಿ ಈ ಬಾರಿಯ ಶುಲ್ಕದ ಪ್ರಮಾಣ ನಿರ್ಧರಿಸಬೇಕು. ಈ ವಿಚಾರದಲ್ಲಿ ತಕ್ಷಣ ಸರ್ಕಾರ ಮಧ್ಯ ಪ್ರವೇಶಿಸಿ ಪೋಷಕರು ಮತ್ತು ಆಡಳಿತ ಮಂಡಳಿಗಳ ನಡುವಿನ ಸಂಘರ್ಷ ನಿಲ್ಲಿಸಬೇಕು. ಈ ಸಮಸ್ಯೆ ಮುಂದುವರೆದಷ್ಟೂ ಮಕ್ಕಳ ಕಲಿಕೆಯ ಮೇಲೆ, ಮಾನಸಿಕತೆ ಮೇಲೆ ಮತ್ತು ಶೈಕ್ಷಣಿಕ ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!