ಬೆಂಗಳೂರು: ಆರ್ ಎಸ್ ಎಸ್ ಎಂದರೆ ಏನು ಸಾಮಾಜಿಕ ಸೇವಾ ಸಂಘಟನೆಯೇ? ಸಾರ್ವಜನಿಕ ದತ್ತಿಯೇ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷಕ್ಕೆ ನಾಯಕರನ್ನ ಉತ್ಪಾದಿಸಿ ಕೊಡುವ ಕಾರ್ಖಾನೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ಆರ್ ಎಸ್ ಎಸ್ ಎನ್ನುವುದು ಹಿಂದುಗಳ ಸಂಘಟನೆ ಎಂದು ಹೇಳುವುದಾದಾರೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ? ಬೇರೆ ಪಕ್ಷದವರು ಹಿಂದೂಗಳಲ್ಲವೇ? ಆರ್.ಎಸ್.ಎಸ್ ಸಂಸ್ಕೃತಿಯ ವ್ಯಾಖ್ಯಾನವೇನು? ಮಂಗಳೂರಿನಲ್ಲಿ ಅಮಾಯಕರ ಮೇಲೆ ನಡೆಸಿದ ಹಲ್ಲೆ ಕೂಡಾ ಈ ಸಂಸ್ಕೃತಿಯಲ್ಲಿ ಸೇರಿದೆಯೇ? ದೇಶ ಮತ್ತು ಹಿಂದುಗಳ ರಕ್ಷಣೆ ಮಾಡಲು ಆರ್.ಎಸ್.ಎಸ್ ನಾಯಕರಿಗೆ ಗುತ್ತಿಗೆ ಕೊಟ್ಟವರಾರು?
ಆರ್.ಎಸ್.ಎಸ್ ನಾಯಕರೇನು ಜನರಿಂದ ಚುನಾಯಿತರಾದ ನಾಯಕರೇ? ಅವರು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಬಾರದು? ನಿಮ್ಮ ಎರಡು ಸಂಘಟನೆಗಳ ನಡುವೆ ಮುಖ ಯಾವುದು? ಮುಖವಾಡ ಯಾವುದು? ನಾನು ಮತ್ತು ನನ್ನಂತಹ ಕೋಟ್ಯಂತರ ಜನ ನಿರ್ಭೀತಿ ಮತ್ತು ಆತ್ಮಗೌರವದಿಂದ ಬದುಕುತ್ತಿರುವುದು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ಎಂದು ಸಿದ್ಧರಾಮಯ್ಯ ಆರ್.ಎಸ್.ಎಸ್. ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.