Wednesday, February 26, 2025
Wednesday, February 26, 2025

ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ವಿಧಿವಶ

ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ವಿಧಿವಶ

Date:

ವಿಜಯಪುರ: ವಿಶ್ವದಾದ್ಯಂತ ನಡೆದಾಡುವ ದೇವರು ಎಂಬ ಪ್ರಖ್ಯಾತಿಗೆ ಕಾರಣರಾದ ಖ್ಯಾತ ಪ್ರವಚನಕಾರರು ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಸೋಮವಾರ ವಿಧಿವಶರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಇತ್ತೀಚೆಗೆ ಸ್ವಾಮೀಜಿಗಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಶ್ರೀಗಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಿದ್ದೇಶ್ವರ ಸ್ವಾಮೀಜಿಗಳು ಸೋಮವಾರ ವಿಧಿವಶರಾದರು.

ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ತಮ್ಮ ಪ್ರವಚನಗಳ‌ ಮೂಲಕ ಕೋಟ್ಯಂತರ ಜನರಿಗೆ ಜ್ಞಾನದಾಸೋಹ ನೀಡಿದ ನಡೆದಾಡುವ ದೇವರು, ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಸಿದ್ದೇಶ್ವರ ಸ್ವಾಮೀಜಿ ವಿಧಿವಶರಾದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ. ಪೂಜ್ಯರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಕ್ತರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಜ್ಞಾನಯೋಗಾಶ್ರಮದ ಪೀಠಾಧೀಶರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ. ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಲಾರದ ನಷ್ಟ. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ಮತ್ತು ಭಕ್ತವೃಂದಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!