Monday, January 20, 2025
Monday, January 20, 2025

ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ವಿಜಯಪುರ, ಜ.2: ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ನಡೆದ ಸಿದ್ದೇಶ್ವರ ಮಹಾಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ.
ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು.

ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು. ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಶ್ರೀಗಳು ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಅವರು ದಾರ್ಶನಿಕರಾಗಿದ್ದರು ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!