ಬೆಂಗಳೂರು, ಅ.24: ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
2025ರ ಜನವರಿ ತಿಂಗಳಲ್ಲಿ 2-3 ದಿನಗಳ ಕಾಲ ನಡೆಯುವ ಈ ಶೃಂಗಸಭೆಗೆ ಕಾರ್ಪೋರೇಟ್ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು, ನಾಸ್ಕಂ, ಕೈಗಾರಿಕೆಗಳು, ಕೌಶಲ ತರಬೇತುದಾರರನ್ನು ಆಹ್ವಾನಿಸಲಾಗುವುದು. ಮುಂದಿನ 3-4 ವರ್ಷ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಬಹುದು. ನೀಲನಕ್ಷೆ ಸಿದ್ದಪಡಿಸಲಾಗುವುದು ಮತ್ತು ಬಜೆಟ್‌ನಲ್ಲಿ ಅನುದಾನ ಹಂಚಿಕೆಗೂ ಸಹಕಾರಿಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.