ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ, ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಮಾತನಾಡಿದರು. ಪ್ರತಿಪಕ್ಷಗಳು ಈ ಸಮೀಕ್ಷೆಯನ್ನು ಏಕೆ ವಿರೋಧಿಸುತ್ತಿವೆ? ವರದಿಯಲ್ಲಿ ಏನಿದೆ ಎಂದು ತಿಳಿಯದೇ ವಿರೋಧ ಹೇಗೆ ಮಾಡುತ್ತಾರೆ? ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ. ನಮ್ಮ ಪ್ರಣಾಳಿಕೆಯಲ್ಲಿ ಈ ಸಮೀಕ್ಷಾ ವರದಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ. ಅದರಂತೆ ನಡೆಯುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ
ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ
Date: