Sunday, January 19, 2025
Sunday, January 19, 2025

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

Date:

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರ ಪದಗ್ರಹಣ ಸಮಾರಂಭ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಮತ್ತಷ್ಟು ಉತ್ತುಂಗಕ್ಕೆ ಬೆಳೆಯಲಿ ಎಂದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ನ ಅಧ್ಯಕ್ಷೆ ಅಲ್ಕಾ ಲಂಬಾ, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್‌, ವಿಧಾನ ಪರಿಷತ್‌ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಶಾಸಕರಾದ ಎನ್‌.ಎ.ಹ್ಯಾರಿಸ್‌, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್‌ ಪಟ್ಟಣ್‌, ಶಾಸಕಿ ನಯನಾ ಮೋಟಮ್ಮ, ಮಾಜಿ ಸಚಿವರಾದ ರಾಣಿ ಸತೀಶ್‌, ಮೋಟಮ್ಮ, ಮಾಜಿ ಅಧ್ಯಕ್ಷರಾದ ಪುಷ್ಪ ಅಮರ್‌ನಾಥ್‌, ಮಂಜುಳಾ ನಾಯ್ಡು, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!