Thursday, November 21, 2024
Thursday, November 21, 2024

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶ

Date:

ಬೆಂಗಳೂರು, ಸೆ.25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ. ಡಿಸೆಂಬರ್ 24 ರೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಆದೇಶಿಸಿದ್ದಾರೆ. ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಮುಡಾದಿಂದ ಅವರ ಪತ್ನಿ ಬಿಎಂ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದ ಒಂದು ದಿನದ ನಂತರ ವಿಶೇಷ ನ್ಯಾಯಾಲಯದ ತೀರ್ಪು ಹೊರಬಿದ್ದಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಮುಡಾ ಪ್ರಕರಣದ ತನಿಖೆಗೆ ಹೈಕೋರ್ಟ್ ಅನುಮೋದನೆ ನೀಡಿತ್ತು.

ತನಿಖೆ ಎದುರಿಸಲು ನಾನು ಸಿದ್ಧ: ಸಿಎಂ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ನೀಡುತ್ತೇನೆ. ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ. ಈ ಮಾತನ್ನು ನಿನ್ನೆಯೂ ಹೇಳಿದ್ದೆ, ಅದನ್ನೆ ಈಗಲೂ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ಹೆದರುವ ಪ್ರಶ್ನೆ ಇಲ್ಲ, ಎಲ್ಲವನ್ನು ಎದುರಿಸಲು ನಿರ್ಧರಿಸಿದ್ದೇನೆ. ಕಾನೂನು ಪರಿಣಿತರ ಜೊತೆ ಚರ್ಚೆ ಮಾಡಿ ಮುಂದಿನ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕೇರಳದಲ್ಲಿ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!