Tuesday, October 15, 2024
Tuesday, October 15, 2024

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶ

Date:

ಬೆಂಗಳೂರು, ಸೆ.25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ. ಡಿಸೆಂಬರ್ 24 ರೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಆದೇಶಿಸಿದ್ದಾರೆ. ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಮುಡಾದಿಂದ ಅವರ ಪತ್ನಿ ಬಿಎಂ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದ ಒಂದು ದಿನದ ನಂತರ ವಿಶೇಷ ನ್ಯಾಯಾಲಯದ ತೀರ್ಪು ಹೊರಬಿದ್ದಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಮುಡಾ ಪ್ರಕರಣದ ತನಿಖೆಗೆ ಹೈಕೋರ್ಟ್ ಅನುಮೋದನೆ ನೀಡಿತ್ತು.

ತನಿಖೆ ಎದುರಿಸಲು ನಾನು ಸಿದ್ಧ: ಸಿಎಂ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ನೀಡುತ್ತೇನೆ. ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ. ಈ ಮಾತನ್ನು ನಿನ್ನೆಯೂ ಹೇಳಿದ್ದೆ, ಅದನ್ನೆ ಈಗಲೂ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ಹೆದರುವ ಪ್ರಶ್ನೆ ಇಲ್ಲ, ಎಲ್ಲವನ್ನು ಎದುರಿಸಲು ನಿರ್ಧರಿಸಿದ್ದೇನೆ. ಕಾನೂನು ಪರಿಣಿತರ ಜೊತೆ ಚರ್ಚೆ ಮಾಡಿ ಮುಂದಿನ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕೇರಳದಲ್ಲಿ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!