ತುಮಕೂರು: ರಾಷ್ಟ್ರೀಯ ಶಾಸ್ತ್ರೀಯ ನೃತ್ಯ ಅಕಾಡೆಮಿ (ರಿ.) ಚನ್ನರಾಯಪಟ್ಟಣ ಹಾಸನ ವತಿಯಿಂದ ನೀಡಲ್ಪಡುವ ಶ್ರೀ ಬಾಲಾಜಿ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಶ್ರೀ ಸರ್ವೇಶ್ವರಿ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಲಕ್ಷ್ಮೀಶ್ ಸಿಆರ್ ಇವರ ಧಾರ್ಮಿಕ ಸಾಮಾಜಿಕ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ.
ಡಿಸೆಂಬರ್ 11 ರಂದು ತಿರುಪತಿಯಲ್ಲಿ ನೆಡೆಯಲಿರುವ 51ನೇ ಅಖಿಲ ಭಾರತ ಶಾಸ್ತ್ರೀಯ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.