ಬೆಂಗಳೂರು, ಸೆ.14: ಎಸ್ಎಸ್ಎಲ್ಸಿ ಅರ್ಧ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಮಾಪನ – 1) ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 1ರ ವರೆಗೆ ನಡೆಯಲಿದೆ.
ಇದೇ ಮೊದಲ ಬಾರಿಗೆ ಎಲ್ಲ ಪ್ರೌಢಶಾಲೆಗಳಲ್ಲೂ ಏಕರೂಪದ ಪರೀಕ್ಷೆ ನಡೆಸಲಾಗುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲ ವಿಷಯಗಳ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ್ದು, ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುತ್ತದೆ. ಪರೀಕ್ಷಾ ಸಮಯಕ್ಕೆ ಸರಿಯಾಗಿ ಎಲ್ಲ ಶಾಲೆಗಳಿಗೂ ತಲುಪಲಿವೆ. ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ಅಕ್ಟೋಬರ್ 1 ರಂದು ಮಧ್ಯಾಹ್ನ ಆಯಾ ಶಾಲೆಗಳಲ್ಲಿ ನಡೆಸಲು ಮಂಡಳಿ ಸೂಚಿಸಿದೆ.