Wednesday, February 26, 2025
Wednesday, February 26, 2025

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Date:

ಬೆಂಗಳೂರು: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ. 85.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪತ್ರಿಕಾಗೋಷ್ಠಿಯ ಮೂಲಕ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, 8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, ಇದರಲ್ಲಿ ಶೇ. 90.29 ಬಾಲಕಿಯರು ಹಾಗೂ ಶೇ. 81.30 ಬಾಲಕರು ಉತ್ತೀರ್ಣರಾಗಿದ್ದಾರೆ. ಒಟ್ಟು 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಹೇಳಿದರು.

ಈ ಬಾರಿ ಜಿಲ್ಲೆಗಳ ನಡುವೆ ಪ್ರಥಮ ದ್ವಿತೀಯ ಎಂಬ ಪೈಪೋಟಿಗೆ ಅವಕಾಶ ಇಲ್ಲ. ಆದ್ದರಿಂದ ಗ್ರೇಡ್ ವ್ಯವಸ್ಥೆ ಮಾಡಲಾಗಿದೆ. 145 ಮಂದಿ ವಿದ್ಯಾರ್ಥಿಗಳಿಗೆ 625 ರಲ್ಲಿ 625 ಅಂಕ ಲಭಿಸಿದೆ. 309 ವಿದ್ಯಾರ್ಥಿಗಳಿಗೆ 625ರಲ್ಲಿ 624 ಅಂಕ ಬಂದಿದೆ ಎಂದು ಸಚಿವರು ಮಾಹಿತಿ ನೀಡಿದರು.

ಒತ್ತಡದಲ್ಲಿರುವವರಿಗೆ ಸಹಾಯವಾಣಿ: ಎಸ್ ಎಸ್ ಎಲ್ ಸಿ ಫಲಿತಾಂಶ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಈ ಮೂಲಕ ಟೆಲಿ ಕೌನ್ಸಿಲಿಂಗ್ ಒದಗಿಸಲಾಗುತ್ತದೆ. ಒತ್ತಡದಲ್ಲಿರುವ ವಿದ್ಯಾರ್ಥಿಗಳು 080 46110007 ಸಂಖ್ಯೆಗೆ ಕರೆ ಮಾಡಿ.

ಪೂರಕ ಪರೀಕ್ಷೆಗೆ ದಿನಾಂಕ ನಿಗದಿ:
ಜೂನ್ 27 ರಿಂದ ಜುಲಾಯಿ 4ರ ವರೆಗೆ ಪೂರಕ ಪರೀಕ್ಷೆ ನಡೆಯಲಿದೆ.

ಫಲಿತಾಂಶಕ್ಕಾಗಿ- https://karresults.nic.inhttps://kseeb.kar.nic.inhttps://sslc.karnataka.gov.in 

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!