Saturday, May 9, 2026
Saturday, May 9, 2026

ಅತ್ತಿಬೆಲೆ ಬೆಂಕಿ ಅವಘಡ: ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ

ಅತ್ತಿಬೆಲೆ ಬೆಂಕಿ ಅವಘಡ: ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ

Date:

ಬೆಂಗಳೂರು, ಅ.8: ಅತ್ತಿಬೆಲೆ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಅತ್ತಿಬೆಲೆ ಗಡಿಯ ಆನೆಕಲ್ ನಗರದ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.

ಅವರು ಶನಿವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಪರಿಹಾರ ಘೋಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಘಟನೆಯ ಕುರಿತು ಮುಖ್ಯಮಂತ್ರಿಗಳ ಜತೆ ಮಾತನಾಡಿದ್ದೇನೆ. ಬೆಂಕಿ ಅವಘಡದಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಘಟನೆಯ ಕುರಿತು ತನಿಖೆಗೆ ಆದೇಶ ನೀಡಿದ್ದೇವೆ. ಪರವಾನಿಗೆ ನಿಯಮ ಗಾಳಿ ತೂರಲಾಗಿದೆಯೇ ಎಂಬ ಸಂಶಯ ಇದೆ. ತನಿಖೆಯ ನಂತರ ಎಲ್ಲವೂ ಸ್ಪಷ್ಟವಾಗಲಿದೆ ಎಂದರು.

ಏನಾಗಿತ್ತು?: ಆನೇಕಲ್ ಬಳಿಯ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಶನಿವಾರ ಮಧ್ಯಾಹ್ನ ದಿಢೀರನೆ ಬೆಂಕಿ ಕಾಣಿಸಿಕೊಂಡಿತು. ರಾಷ್ಟ್ರೀಯ ಹೆದ್ದಾರಿಯ ಸನಿಹವೇ ಈ ಪಟಾಕಿ ಮಳಿಗೆ ಇದ್ದ ಕಾರಣ, ಮಳಿಗೆಯ ಹತ್ತಿರದಲ್ಲಿದ್ದ ದಾಸ್ತಾನು ಮಳಿಗೆಗೂ ಬೆಂಕಿ ಆವರಿಸಿತು. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 7 ದ್ವಿಚಕ್ರ ವಾಹನ, ಕಂಟೇನರ್ ಲಾರಿ ಮತ್ತು ಮೂರು ಇತರ ವಾಹನಗಳು ಬೆಂಕಿಗೆ ಆಹುತಿಯಾಗಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: ಆಮಂತ್ರಣ ಪತ್ರಿಕೆ ಬಿಡುಗಡೆ

ಪರ್ಕಳ, ಮೇ 9: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ...

ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ನೌಕಾಪಡೆಯ ಮುಖ್ಯಸ್ಥರನ್ನಾಗಿ ನೇಮಿಸಿದ ಸರ್ಕಾರ

ನವದೆಹಲಿ, ಮೇ 9: ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ಮುಂದಿನ...

ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್.ರಾಜಾ ಸುಬ್ರಮಣಿ (ನಿವೃತ್ತ) ನೇಮಕ

ನವದೆಹಲಿ, ಮೇ 9: ಸರ್ಕಾರವು ಲೆಫ್ಟಿನೆಂಟ್ ಜನರಲ್ ಎನ್.ಎಸ್.ರಾಜಾ ಸುಬ್ರಮಣಿ ಪಿವಿಎಸ್ಎಂ,...

ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ

ಬೆಂಗಳೂರು, ಮೇ 8: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ "ಫೆಮಿನಾ ಮಿಸ್...
error: Content is protected !!