Monday, January 20, 2025
Monday, January 20, 2025

ಮತದಾನ: ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

ಮತದಾನ: ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಫಲಿತಾಂಶ ಪ್ರಕಟ

Date:

ಉಡುಪಿ, ಮೇ 27: ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಮಾಧ್ಯಮ ಹಾಗೂ ಹವ್ಯಾಸಿ ಛಾಯಾಗ್ರಾಹಕರಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ವಿಜೇತರ ವಿವರ ಈ ಕೆಳಗಿನಂತಿದೆ. ಪ್ರಜಾವಾಣಿ/ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆಯ ಮಂಗಳೂರು ಛಾಯಾಗ್ರಾಹಕ ಹೆಚ್ ಫಕ್ರುದ್ದೀನ್ ಪ್ರಥಮ, ಬಾಗಲಕೋಟೆಯ ಹಳ್ಳಿ ಸಂದೇಶ ಪತ್ರಿಕೆಯ ಇಂದ್ರಕುಮಾರ್ ಬಿ ದಸ್ತೇನವರ ದ್ವಿತೀಯ, ಮೂಡಬಿದಿರೆಯ ಹವ್ಯಾಸಿ ಛಾಯಾಗ್ರಾಹಕ ಜಿನೇಶ್ ಪ್ರಸಾದ್ ತೃತೀಯ, ಸಮಾಧಾನಕರ ಬಹುಮಾನಕ್ಕೆ ಇಬ್ಬರು ಆಯ್ಕೆಯಾಗಿದ್ದು ಉಡುಪಿಯ ಉದಯವಾಣಿ ಪತ್ರಿಕೆಯ ಅಸ್ಟ್ರೋ ಮೋಹನ್ ಹಾಗೂ ಬೆಂಗಳೂರಿನ ಸಂಜೆ ಸಮಯ ಪತ್ರಿಕೆಯ ಪೂರ್ಣಿಮ ರವಿ ಮತ್ತು ವಿಶೇಷ ಬಹುಮಾನಕ್ಕೆ ಸಹ ಇಬ್ಬರು ಆಯ್ಕೆಯಾಗಿದ್ದು, ಮೈಸೂರಿನ ವಿಜಯವಾಣಿ ಪತ್ರಿಕೆಯ ಕೆ.ಹೆಚ್ ಚಂದ್ರು ಹಾಗೂ ಕಲಬುರಗಿಯ ವಿಜಯ ಕರ್ನಾಟಕ ಪತ್ರಿಕೆಯ ಶಿವಶರಣಪ್ಪ ಬೆನ್ನೂರ್ ಅವರು ವಿಜೇತರಾಗಿದ್ದಾರೆ. ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುವುದು.

ರಾಜ್ಯಮಟ್ಟದ ಈ ಛಾಯಾಚಿತ್ರ ಸ್ಪರ್ಧೆಯ ಆಯ್ಕೆ ಸಮಿತಿಯಲ್ಲಿ ಅಧ್ಯಕ್ಷರಾಗಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಮಾಧ್ಯಮ ವಿಭಾಗದ ವಿಶೇಷ ಅಧಿಕಾರಿ ಎ.ವಿ.ಸೂರ್ಯಸೇನ್, ಐ.ಎಫ್.ಎಸ್, ಸದಸ್ಯರಾಗಿ ರಾಜ್ಯಮಟ್ಟದ ಸ್ವೀಪ್ ಹಿರಿಯ ಸಮಾಲೋಚಕರಾದ ನಿವೃತ್ತ ಐ.ಎ.ಎಸ್ ಅಧಿಕಾರಿ ಪಿ.ಎಸ್. ವಸ್ತ್ರದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಛಾಯಾಚಿತ್ರ ವಿಭಾಗದ ಅಧಿಕಾರಿ ಚಂದ್ರಶೇಖರ್, ನಿವೃತ್ತ ಹಾಗೂ ಹಿರಿಯ ಛಾಯಾಗ್ರಾಹಕರಾದ ವಿಶ್ವನಾಥ್ ಸುವರ್ಣ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಹಿರಿಯ ಸಹಾಯಕ ನಿರ್ದೇಶಕರಾದ ಜಡಿಯಪ್ಪ ಗೆದ್ಲಗಟ್ಟಿ ಅವರನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ನೇಮಿಸಲಾಗಿತ್ತು. ರಾಜ್ಯಮಟ್ಟದ ಈ ಸ್ಪರ್ಧೆಯಲ್ಲಿ ಮಾಧ್ಯಮಗಳಲ್ಲಿ ಕಾರ್ಯ ನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರು ಸೇರಿದಂತೆ ಒಟ್ಟು 219 ಜನರು ಭಾಗವಹಿಸಿದ್ದು, ಛಾಯಾಗ್ರಾಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಕಳುಹಿಸಿದ್ದರು. ಪ್ರಶಸ್ತಿಗೆ ಆಯ್ಕೆಯಾದ ಎಲ್ಲರಿಗೂ ಮುಖ್ಯ ಚುನಾವಣಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!