ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಅಕಾಡೆಮಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸುವಂತೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸಲಹೆ ನೀಡಿದರು.
ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ವಾರ್ತಾ ಇಲಾಖೆ ಆಯುಕ್ತ ಜಿ. ಜಗದೀಶ್ ಉಪಸ್ಥಿತರಿದ್ದರು.