Sunday, November 8, 2026
Sunday, November 8, 2026

ಜೂನ್ 16 ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಪ್ರಶಿಕ್ಷಣ ಕಾರ್ಯಾಗಾರ: ಯಶ್ಪಾಲ್ ಸುವರ್ಣ

ಜೂನ್ 16 ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಪ್ರಶಿಕ್ಷಣ ಕಾರ್ಯಾಗಾರ: ಯಶ್ಪಾಲ್ ಸುವರ್ಣ

Date:

ಉಡುಪಿ: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಕಾರ್ಯಗಾರ ಜೂನ್ 16 ರಿಂದ 18  ರವರೆಗೆ ಬೆಂಗಳೂರಿನ ಹೋಟೆಲ್ ರಮಡ ದಲ್ಲಿ ಆಯೋಜಿಸಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಪ್ರಶಿಕ್ಷಣ ಕಾರ್ಯಗಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಕೆ ಲಕ್ಷ್ಮಣ ಅಧ್ಯಕ್ಷತೆ ವಹಿಸಲಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಜೆ ಪಿ ನಡ್ಡಾ, ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲು, ಬಿಜೆಪಿ ಪ್ರಶಿಕ್ಷಣ ವಿಭಾಗದ ರಾಷ್ಟ್ರೀಯ ಪ್ರಭಾರಿ ಮುರಳೀಧರ ರಾವ್ ಹಾಗೂ ಪಕ್ಷದ ವಿವಿಧ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.

ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಕಾರ್ಯಾಗಾರದ ಬಗ್ಗೆ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚಿಸಿದ್ದು, ಪೂರ್ವ ಸಭೆಯಲ್ಲಿ ಯಲಹಂಕ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್ ಆರ್ ವಿಶ್ವನಾಥ್, ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಖಿಲ್ ಅನಂದ್,  ಮೋರ್ಚಾದ ರಾಷ್ಟ್ರೀಯ ಕಾರ್ಯಾಲಯ ಕಾರ್ಯದರ್ಶಿ ಸಂಜಯ್ ಗುಜ್ಜರ್, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷರಾದ ನೆ ಲ ನರೇಂದ್ರ ಬಾಬು, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಬಾಬು, ಮೋರ್ಚಾದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ. 10: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ನ.೮: ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 10 ರಂದು ಉಡುಪಿ...

ಪೈಪ್‌ಲೈನ್ ಬದಲಾವಣೆ ಕಾಮಗಾರಿ: ಉಡುಪಿ ಬಡಗುಪೇಟೆಯಲ್ಲಿ ವಾಹನ ಸಂಚಾರ ನಿಷೇಧ; ಬದಲಿ ಮಾರ್ಗ

ಉಡುಪಿ, ನ.8: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ...

ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಅಹವಾಲುಗಳನ್ನು ಆದ್ಯತೆಯ ಮೇಲೆ ಬಗೆಹರಿಸಿ: ಶಾಸಕ ಸುನಿಲ್ ಕುಮಾರ್

ಉಡುಪಿ, ನ.8: ಆಡಳಿತದಲ್ಲಿ ಸುಧಾರಣೆ ತರುವುದರೊಂದಿಗೆ ಜನರ ಅಹವಾಲುಗಳನ್ನು ಸ್ಥಳದಲ್ಲಿಯೇ ನಿವಾರಿಸಲು,...

ನಾಡೋಜ ಡಾ.ಜಿ ಶಂಕರ್ ರವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ

ಕೋಟ, ನ.8: ನಾಡೋಜ ಜಿ.ಶಂಕರ್ ರವರ ವ್ಯಕ್ತಿತ್ವ ವಿಭಿನ್ನವಾದದ್ದು ಸಮಾಜಕ್ಕಾಗಿ ತನ್ನ...
error: Content is protected !!