Tuesday, November 26, 2024
Tuesday, November 26, 2024

ಇದು ಕರ್ನಾಟಕದ ಗೆಲುವು: ಸಿದ್ಧರಾಮಯ್ಯ

ಇದು ಕರ್ನಾಟಕದ ಗೆಲುವು: ಸಿದ್ಧರಾಮಯ್ಯ

Date:

ಬೆಂಗಳೂರು, ಮೇ 13:  ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ, ಇದು ಕರ್ನಾಟಕದ ಗೆಲುವು. ಕನ್ನಡಿಗರ ಗೆಲುವು, ಪ್ರಜಾಪ್ರಭುತ್ವದ ಗೆಲುವು.

ಈ ಗೆಲುವಿಗಾಗಿ ರಾಜ್ಯದ ಸಮಸ್ತ ಕನ್ನಡಿಗರೂ ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷದ ಐತಿಹಾಸಿಕ ಗೆಲುವಿನ ನಂತರ ಸಂತಸ ವ್ಯಕ್ತಪಡಿಸಿದರು.

ಯಾವುದೇ ಚುನಾವಣೆಯಲ್ಲಿ ಕೇವಲ ರಾಜಕೀಯ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಮಾತ್ರವಲ್ಲ, ಲಕ್ಷಾಂತರ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲದ ಅಭಿಮಾನಿಗಳು ರಾತ್ರಿ ಹಗಲು ಶ್ರಮಪಟ್ಟಿರುತ್ತಾರೆ. ಅವರೆಲ್ಲರಿಗೂ ತುಂಬು ಹೃದಯದ ಕೃತಜ್ಞತೆಗಳು.

ಈ ಚುನಾವಣೆಯಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರು ನಡೆಸಿರುವ ಪ್ರಯತ್ನವನ್ನು ಮರೆಯಲಾಗದು. ಬಹಳ ಮುಖ್ಯವಾಗಿ ಕರ್ನಾಟಕದ ಚುನಾವಣಾ ಪ್ರಚಾರ ಪ್ರಾರಂಭವಾಗಿದ್ದೇ ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆಯಿಂದ. ಈ ಯಾತ್ರೆ ಇಡೀ ಕರ್ನಾಟಕದಲ್ಲಿ ಸಂಚಲನ ಉಂಟುಮಾಡಿತ್ತು. ನಮ್ಮ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿತ್ತು. ಈ ಫಲಿತಾಂಶದ ಶ್ರೇಯಸ್ಸು ಅವರಿಗೂ ಸಲ್ಲುತ್ತದೆ.

ಅದೇ ರೀತಿ ಪ್ರಿಯಾಂಕ ಗಾಂಧಿಯವರ ಚುನಾವಣಾ ಪ್ರಚಾರ ಈ ಬಾರಿಯ ಹೊಸ ಆಕರ್ಷಣೆಯಾಗಿತ್ತು. ಬಹಳ ಮುಖ್ಯವಾಗಿ ಮಹಿಳಾ ಮತದಾರರ ಮೇಲೆ ಪ್ರಿಯಾಂಕ ಪ್ರಭಾವ ಬೀರಿದ್ದರು. ಅವರನ್ನು ನೋಡಿದ್ದ ಬಹಳಷ್ಟು ಮತದಾರರು ಇಂದಿರಾ ಗಾಂಧಿಯವರನ್ನು ನೆನಪು ಮಾಡಿಕೊಂಡಿದ್ದರು. ಪಕ್ಷ ಪ್ರಿಯಾಂಕ ಗಾಂಧಿಯವರಿಗೆ ಕೃತಜ್ಞವಾಗಿದೆ.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಾ ತಮ್ಮೆಲ್ಲ ಬಿಡುವಿರದ ಕಾರ್ಯಕ್ರಮಗಳ ನಡುವೆಯೂ ರಾಜ್ಯಕ್ಕೆ ಬಂದು ಪ್ರಚಾರ ನಡೆಸಿದ್ದಾರೆ. ಕನ್ನಡಿಗನೊಬ್ಬ ಎಐಸಿಸಿ ಅಧ್ಯಕ್ಷರಾಗಿರುವುದು ಕೂಡಾ ಕನ್ನಡಿಗ ಮತದಾರರ ಮೇಲೆ ಪ್ರಭಾವ ಬೀರಿದಂತೆ ಕಾಣುತ್ತಿದೆ.

ಈ ಫಲಿತಾಂಶ ಅನಿರೀಕ್ಷಿತ ಅಲ್ಲ. ಜನರ ಜೊತೆ ಸಂಪರ್ಕದಲ್ಲಿರುವವರಿಗೆ ಇದು ನಿರೀಕ್ಷಿತ ಫಲಿತಾಂಶ. ಆದರೆ ಈ ಫಲಿತಾಂಶ ಕೇವಲ ಬಿಜೆಪಿ ವಿರುದ್ಧದ ಜನಮತ ಮಾತ್ರ ಅಲ್ಲ, ಇದು ಕಾಂಗ್ರೆಸ್ ಪಕ್ಷದ ಪರವಾಗಿರುವ ಫಲಿತಾಂಶ ಕೂಡಾ ಹೌದು. ಇದು ಸುಭದ್ರ ಸರ್ಕಾರಕ್ಕಾಗಿ ಜನ ನೀಡಿರುವ ಮತಗಳಾಗಿವೆ. ಕಳೆದ ನಾಲ್ಕು ವರ್ಷಗಳ ಬಿಜೆಪಿ ಆಡಳಿತವನ್ನು ರಾಜ್ಯದ ಮತದಾರರು 2013ರಿಂದ 2018ರ ಕಾಂಗ್ರೆಸ್ ಆಡಳಿತದ ಜೊತೆ ಖಂಡಿತ ಹೋಲಿಸಿ ಮತ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಹೊರತುಪಡಿಸಿದರೆ ರಾಜ್ಯದಲ್ಲಿ ಬೇರೆ ಯಾವ ಪಕ್ಷಗಳು ಕೂಡಾ ಸುಭದ್ರ ಸರ್ಕಾರ ನೀಡಿರುವ ಉದಾಹರಣೆಗಳಿಲ್ಲ. 2013-2018ರ ಅವಧಿಯ ನಮ್ಮ ಆಡಳಿತದಲ್ಲಿ ನಾವು ಜನತೆಗೆ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸಿದ್ದೇವೆ. ನಮ್ಮ ದಕ್ಷ ಮತ್ತು ಜನಪರ ಆಡಳಿತವನ್ನು ಜನ ಮರೆತಿಲ್ಲ ಎನ್ನುವುದನ್ನು ಕೂಡಾ ಫಲಿತಾಂಶ ತೋರಿಸುತ್ತಿದೆ. ಆದ್ದರಿಂದ ಈ ಫಲಿತಾಂಶ ಕೇವಲ ನೆಗೆಟಿವ್ ವೋಟ್ ಅಲ್ಲ, ಇದು ಪಾಸಿಟಿವ್ ವೋಟ್ ಕೂಡಾ ಹೌದು ಎನ್ನುವುದು ನನ್ನ ಅಭಿಪ್ರಾಯ.

ಈ ಫಲಿತಾಂಶ ಜೆಡಿಎಸ್ ಪಕ್ಷದ ಸ್ವಾರ್ಥ ಮತ್ತು ಅವಕಾಶವಾದಿ ರಾಜಕಾರಣದ ವಿರುದ್ಧದ ಜನಮತ ಕೂಡಾ ಹೌದು. ನಮ್ಮ ಸರ್ಕಾರದ ಮೇಲೆ ದೊಡ್ಡ ಜವಾಬ್ದಾರಿ ಇದೆ. ಪ್ರಣಾಳಿಕೆಯ ಮೂಲಕ ರಾಜ್ಯದ ಜನತೆಗೆ ನೀಡಿರುವ ಭರವಸೆಗಳನ್ನು ನಾವು ಈಡೇರಿಸುತ್ತೇವೆ ಎನ್ನುವುದನ್ನು ರಾಜ್ಯದ ಮತದಾರರು ಬಲವಾಗಿ ನಂಬಿದ್ದಾರೆ. ಇದಕ್ಕೆ ಕಾರಣ ಹಿಂದಿನ ನಮ್ಮ ಸರ್ಕಾರದ ಕಾಲದಲ್ಲಿ ನಾವು ಪ್ರಣಾಳಿಕೆಯ ಮೂಲಕ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಿರುವುದು.

ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ನಾವು ಈಡೇರಿಸುತ್ತೇವೆ. ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ನಮ್ಮ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ.
ರಾಜ್ಯದ ಜನತೆ ಇನ್ನು ನೆಮ್ಮದಿಯಿಂದ ಇರಬಹುದು. ರಾಜ್ಯದ ಜನತೆಯ ಕಲ್ಯಾಣ ಮಾತ್ರವಲ್ಲ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ಬದುಕು ಕೂಡಾ ನಮ್ಮ ಗ್ಯಾರಂಟಿ.

ನಮ್ಮ ಪಕ್ಷದ ಕಾರ್ಯಕರ್ತರು ಸಂಯಮದಿಂದ ವಿಜಯೋತ್ಸವವನ್ನು ಆಚರಿಸಬೇಕು. ಎದುರಾಳಿಗಳು ಸೋಲಿನ ಹತಾಶೆಯಿಂದ ಪ್ರಚೋದಿಸಿದರೂ ನಮ್ಮ ಕಾರ್ಯಕರ್ತರು ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು.

ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗಾಗಿ ದುಡಿದ ಪಕ್ಷದ ಕಾರ್ಯಕರ್ತರಿಗೂ, ಮುಖಂಡರಿಗೂ, ನಾಯಕರಿಗೂ ಹಾಗೂ ಮತನೀಡಿ ಆಶೀರ್ವದಿಸಿದ ಎಲ್ಲಾ ಮತದಾರ ಬಂಧುಗಳಿಗೂ ಮತ್ತೊಮ್ಮೆ ಧನ್ಯವಾದಗಳು. ನಾಡಿನ ಸಮಗ್ರ ಅಭಿವೃದ್ಧಿಯೇ ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!