Sunday, January 19, 2025
Sunday, January 19, 2025

ಆಳ್ವಾಸ್ ಕಾಲೇಜು: ‘ಚಿಣ್ಣರ ಮೇಳ- 2023’ ಉದ್ಘಾಟನೆ

ಆಳ್ವಾಸ್ ಕಾಲೇಜು: ‘ಚಿಣ್ಣರ ಮೇಳ- 2023’ ಉದ್ಘಾಟನೆ

Date:

ವಿದ್ಯಾಗಿರಿ (ಮೂಡುಬಿದಿರೆ), ಮೇ 14: ಮಡಿವಂತಿಕೆಯನ್ನು ಬಾಲ್ಯದಲ್ಲೇ ಮಕ್ಕಳಿಂದ ದೂರ ಮಾಡಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರವು ಹಮ್ಮಿಕೊಂಡ ೩೧ನೇ ವರ್ಷದ ರಾಜ್ಯಮಟ್ಟದ ಮಕ್ಕಳ ರಂಗ ಶಿಬಿರ ‘ಚಿಣ್ಣರ ಮೇಳ- 2023’ ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯ ಸಮಾಜಜೀವಿ. ಸಮಾಜದ ಜೊತೆ ಬೆರೆತಾಗಲೇ ನೆಮ್ಮದಿ, ಯಶಸ್ಸು ಎಲ್ಲವೂ ಸಾಧ್ಯ. ಮಕ್ಕಳು ಮಾತನಾಡಬೇಕು. ಎಲ್ಲರೊಂದಿಗೆ ಬೆರೆಯುವಂತೆ ಮಾಡಿ ಎಂದರು. ಮಕ್ಕಳ ಮನಸ್ಸು ಕಟ್ಟುವುದು ಮುಖ್ಯ. ಅದು ವಿಜ್ಞಾನ, ಸಮಾಜ, ವಾಣಿಜ್ಯ ಕಲಿಕೆಗಿಂತಲೂ ಭಿನ್ನ ಎಂದ ಅವರು, ‘ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲ ಎಂಬುದು ಇಂದಿನ ಹಲವು ಪೋಷಕರ ದೂರು. ಆದರೆ, ಸಮಸ್ಯೆ ಪೋಷಕರದ್ದೇ ಹೊರತು ಮಕ್ಕಳದ್ದಲ್ಲ ಎಂದರು. ಬದುಕಿನಲ್ಲಿ ಎಲ್ಲರೂ ನಟರೇ. ಆದರೆ, ಅಭಿನಯ ವಿಭಿನ್ನ ಎಂದರು.

ಶಿಬಿರದ ನಿರ್ದೇಶಕ, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಂ ಸುಳ್ಯ ಮಾತನಾಡಿ, ಮಕ್ಕಳಿನಲ್ಲಿರುವ ಪ್ರತಿಭೆ ಹೊರತರುವುದು ಈ ಶಿಬಿರದ ಉದ್ದೇಶ ಎಂದರು. ಕಲಾವಿದ ತಾರಾನಾಥ ಕೈರಂಗಳ ಮತ್ತು ಇತರರು ಇದ್ದರು. ಸುಮನಾ ಪ್ರಸಾದ್ ಆಶಯ ಗೀತೆ ಹಾಡಿದರು. ಹರ್ಷಿತಾ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!