ಬೆಂಗಳೂರು, ಮೇ 20: ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು 2 ನೇ ಬಾರಿ ಪ್ರಮಾಣವಚನ ಸ್ವೀಕರಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ, 8 ಮಂದಿ ಶಾಸಕರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮಧ್ಯಾಹ್ನ 12.30 ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಪ್ರತಿಜ್ಞೆ ಬೋಧಿಸಿದರು. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.