ಬೆಂಗಳೂರು, ಜೂನ್ 2: ಜುಲೈ ತಿಂಗಳಿನಿಂದ 200 ಯೂನಿಟ್ ವರೆಗೆ ವಿದ್ಯುತ್ ಉಚಿತ, ಆಗಸ್ಟ್ 15ರಂದು ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮನೆಯ ಒಡತಿಗೆ ಪ್ರತಿ ತಿಂಗಳು ರೂ.2,000 ಹಣ ಖಾತೆಗೆ ಜಮಾ. ಜುಲೈ1 ರಿಂದ ಬಿಪಿಎಲ್, ಎಪಿಎಲ್ ಕಾರ್ಡ್ ನ ಪ್ರತಿ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜನರು ನಮ್ಮ ಮೇಲೆ ವಿಶ್ವಾಸವಿಟ್ಟು, ಅಪಾರವಾದ ನಂಬಿಕೆ ಇಟ್ಟು ಅವಕಾಶ ನೀಡಿದ್ದಾರೆ. ನುಡಿದಂತೆ ನಡೆಯುವವರು ನಾವು. ಅಧಿಕಾರ ವಹಿಸಿಕೊಂಡ ಮೊದಲ ದಿನದಿಂದ ಏನು ಮಾತನಾಡಿದ್ದೇವೆ ಆ ಮಾತಿಗೆ ಬದ್ಧರಾಗಿದ್ದೇವೆ ಎಂದರು.