Sunday, January 19, 2025
Sunday, January 19, 2025

ಪುಸ್ತಕದಲ್ಲಿದ್ದ ವಿಚಾರಗಳು ಮಸ್ತಕಕ್ಕೆ ಹೋದರೆ ಮಸ್ತಕವೇ ಒಂದು ಪುಸ್ತಕವಾಗುವುದು: ನ್ಯಾಯವಾದಿ ಎಂ ಗುರುಪ್ರಸಾದ್

ಪುಸ್ತಕದಲ್ಲಿದ್ದ ವಿಚಾರಗಳು ಮಸ್ತಕಕ್ಕೆ ಹೋದರೆ ಮಸ್ತಕವೇ ಒಂದು ಪುಸ್ತಕವಾಗುವುದು: ನ್ಯಾಯವಾದಿ ಎಂ ಗುರುಪ್ರಸಾದ್

Date:

ಬೆಂಗಳೂರು, ಜೂನ್ 4: ಕರ್ನಾಟಕ ಸಾಮಾಜಿಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮತ್ತು ಬರಹ ಪ್ರಕಾಶನ ಮಂಗಳೂರು ಸಾರಥ್ಯದಲ್ಲಿ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಕೃತಿಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸಮ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ನ್ಯಾಯವಾದಿ ಗುರುಪ್ರಸಾದ್ ಮಾತನಾಡಿ, ಪುಸ್ತಕದಲ್ಲಿರುವ ವಿಚಾರಗಳು ಮಸ್ತಕಕ್ಕೆ ಹೋದರೆ ಮಸ್ತಕವೇ ಒಂದು ಪುಸ್ತಕವಾಗಿ ರೂಪುಗೊಳ್ಳುತ್ತದೆ. 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ತಮ್ಮ ಅನುಭವ ಮಂಟಪದಲ್ಲಿ ಇವನಾರವ ಇವನಾರವ ಎಂದೇನಿಸದೆ ಇವ ನಮ್ಮವ ಇವ ನಮ್ಮವ ಎಂದು ಹೇಳುತ್ತಾ ಜಗತ್ತಿನಲ್ಲಿ ಜಾತಿ ಧರ್ಮ ಮೇಲು ಕೀಳು ಎಂಬ ಭಾವನೆ ನಮ್ಮಲ್ಲಿರದೆ ನಾವೆಲ್ಲ ಒಂದೇ ಎಂಬ ಭಾವನೆಯಿಂದ ಇರಬೇಕೆಂದು ಹೇಳಿದ್ದರು.

ಅವರು ತಾಳೆಗರಿಯಲ್ಲಿ 900 ವರ್ಷಗಳ ಹಿಂದೆ ಬರೆದ ಎಷ್ಟೊಂದು ವಚನಗಳು ಇಂದು ನಮಗೆ ದಾರಿದೀಪವಾಗಿದೆ. ಆದುದರಿಂದ ಉತ್ತಮ ಪುಸ್ತಕಗಳನ್ನು ಓದುವುದರ ಮೂಲಕ ನಮ್ಮ ಜೀವನವನ್ನು ಸಾರ್ಥಕ ಗೊಳಿಸಿಕೊಳ್ಳಬೇಕು ಎಂದರು. ನಾವು ಯಾವುದೇ ಶುಭ ಸಮಾರಂಭಗಳನ್ನು ಮಾಡುವಂತಹ ಸಂದರ್ಭದಲ್ಲಿ ಹಾರ ತುರಾಯಿ ನೀಡುವ ಬದಲು ಉತ್ತಮ ಪುಸ್ತಕಗಳನ್ನು ನೀಡಬೇಕು. ಪುಸ್ತಕಗಳನ್ನು ಓದುವ ಮೂಲಕ ನಮ್ಮಲ್ಲಿ ಜ್ಞಾನ ಸಂಪಾದನೆಯಾಗುತ್ತದೆ ಎಂದರು.

ಆ ಕಾಲದಲ್ಲಿ ಮಹಿಳೆಯರ ಸ್ವಾತಂತ್ರ್ಯಕ್ಕಾಗಿ ಒಂದು ಪಾರ್ಲಿಮೆಂಟನ್ನೇ ರಚಿಸಿ ಮಹಿಳೆಯರು ಮನೆಯಲ್ಲಿ ಬಂಧಿಯಾಗಿರದೇ ಸ್ವತಂತ್ರವಾಗಿ ಇರಬೇಕೆಂದು ಬಯಸಿದ್ದರು. ಇದರ ದ್ಯೋತಕವಾಗಿ ಇಂದು ರಾಣಿ ಪುಷ್ಪಲತಾ ದೇವಿಯಂತವರು ಒಂದು ಸಂಸ್ಥೆಯನ್ನು ಸ್ಥಾಪಿಪಿ ಅಧ್ಯಕ್ಷರಾಗಿ ಕಾರ್ಯಕ್ರಮ ನಡೆಸಲು ಸಾಧ್ಯವಾಯಿತು ಎಂದು ಹೇಳಿದರು.

ರಾಣಿ ಪುಷ್ಪಲತಾ ದೇವಿಯವರ ವರ್ಣರಂಜಿತ ಚಿತ್ರ ಕವನಸಂಕಲನ “ಭೂರಮೆಯೊಡಲು” ಹಾಗೂ ಡಾ. ಆನಂದ ಬಂಜನ್ ರವರ “ತುಳುನಾಡ ವೈಭವ” ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಭಾರತ ದೇಶದಾದ್ಯಂತ ಕನ್ನಡಕ್ಕಾಗಿ ದುಡಿದ ಸುಮಾರು 3500 ಪ್ರಮುಖರನ್ನು ಸಮ್ಮಾನಿಸಿದ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಹೆಚ್ ಎಲ್ ಎನ್ ರಾವ್ ಇವರನ್ನು ಸಮ್ಮಾನಿಸಲಾಯಿತು.

ಡಾ. ಆನಂದ್ ಬಂಜನ್, ಕವಿಗೋಷ್ಠಿ ಅಧ್ಯಕ್ಷ ಡಾ. ಫ್ರಾನ್ಸಿಸ್ ಕ್ಸೇವಿಯರ್, ಎನ್.ಎಸ್.ಸಿ.ಡಿ.ಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ, ಕವಿಗೋಷ್ಠಿ ಸಂಚಾಲಕಿ ಸುಧಾ ಕಂದಕೂರ ಉಪಸ್ಥಿತರಿದ್ದರು. ರಾಜ್ ಸಂಪಾಜೆ ಮತ್ತು ರೇಖಾ ಸುರೇಶ್ ರಾವ್ ಕಾರ್ಯಕ್ರಮ ನಿರೂಪಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 40ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚಿಸಿದರು. ಸಭಾ ಕಾರ್ಯಕ್ರಮದ ನಂತರ ಕಾರ್ತಿಕ್ ಡಾನ್ಸ್ ಅಕಾಡೆಮಿ ಬೆಂಗಳೂರು ಮತ್ತು ಧನ್ಯ ಸಂತೋಷ್ ಸಾರಥ್ಯದ ಕೈರಾಳಿ ನಾಟ್ಯಾಲಯ ಹಾಗೂ ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕವಿಗಳಿಗೆ ಮತ್ತು ಕಲಾವಿದರಿಗೆ ಪ್ರಶಂಸನಾ ಪತ್ರ ಮತ್ತು ಪುಸ್ತಕಗಳನ್ನು ನೀಡಲಾಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!