Sunday, January 19, 2025
Sunday, January 19, 2025

ಕೆನರಾ ಹೈಸ್ಕೂಲ್ ಅಸೋಸಿಯೇಷನ್: ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

ಕೆನರಾ ಹೈಸ್ಕೂಲ್ ಅಸೋಸಿಯೇಷನ್: ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Date:

ಮಂಗಳೂರು, ಜೂನ್ 13: ಕೆನರಾ ಹೈಸ್ಕೂಲ್ ಅಸೋಸಿಯೇಷನ್, ಮಂಗಳೂರು ಇವರು ಕೆನರಾ ಪ್ರೌಢ ಶಾಲೆ ಡೊಂಗರಕೇರಿ, ಕೆನರಾ ಪ್ರೌಢ ಶಾಲೆ ಉರ್ವ ಹಾಗೂ ಕೆನರಾ ಸಿಬಿಎಸ್ಇ ಇಲ್ಲಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ಶ್ರೀ ರಮಣ ಪೈ ಸಭಾಭವನದಲ್ಲಿ ನಡೆಯಿತು. ಮೂರು ಪ್ರೌಢಶಾಲೆಗಳ ಸಾಧಕ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಿ ಅವರ ಹೆತ್ತವರ ಜೊತೆಗೆ ಅಭಿನಂದಿಸಲಾಯಿತು.

ಕೆನರಾ ಸಂಸ್ಥೆಯ ಕಾರ್ಯದರ್ಶಿ ಎಂ ರಂಗನಾಥ್ ಭಟ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡುತ್ತಾ, ಇಂದಿನ ಈ ಸಭೆಯಲ್ಲಿ ಸಾಧಕ ವಿದ್ಯಾರ್ಥಿಗಳ ಅನಿಸಿಕೆಯ ಮಾತುಗಳು ನನ್ನಲ್ಲಿ ಹೊಸ ಕಲಿಕೆಗೆ ಅವಕಾಶ ಮಾಡಿಕೊಟ್ಟಿದೆ. ಸಾಧನೆಯನ್ನು ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಡಬಹುದು. ಆದರೆ ಅದರ ಮೂಲ ಶಿಕ್ಷಣವೇ ಆಗಿದೆ. ಜ್ಞಾನದ ಜೊತೆ ಕೌಶಲ್ಯಗಳನ್ನು ಬೆಳೆಸಿಕೊಂಡಾಗ ಜೀವನದ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳ ಬೆನ್ನ ಹಿಂದೆ ಸದಾ ಇರುವ ಶಿಕ್ಷಕರು ಹಾಗೂ ಹೆತ್ತವರು ಮಕ್ಕಳ ಸಾಧನೆಯಲ್ಲಿ ಅಭಿನಂದನಾರ್ಹರು.

ಗುಣಾತ್ಮಕ ಶಿಕ್ಷಣಕ್ಕೆ ನಮ್ಮ ಸಂಸ್ಥೆಯು ಸದಾ ಪ್ರೋತ್ಸಾಹ ನೀಡುತ್ತ ಬಂದಿದೆ. ಹಣಕಾಸಿನ ಕಾರಣದಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗಬಾರದು. ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣವನ್ನು ಉಚಿತವಾಗಿ ನೀಡುವ ಬದ್ಧತೆಯನ್ನು ಕೆನರಾ ಆಡಳಿತ ಮಂಡಳಿ ಹೊಂದಿದೆ. ನೈತಿಕ ಮತ್ತು ಬೌದ್ಧಿಕತೆಯನ್ನು ಬೆಂಬಲಿಸುವ ಕ್ರಿಯಾಶೀಲ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದರು.

ಕೆನರಾ ಆಡಳಿತ ಮಂಡಳಿಯ ಉಪ ಖಜಾಂಚಿ ಹಾಗೂ ಕೆನರಾ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೆನರಾ ಪ್ರೌಢಶಾಲೆ ಡೊಂಗರಕೇರಿ ಇಲ್ಲಿಯ ಸಂಚಾಲಕರಾದ ಸುರೇಶ್ ಕಾಮತ್ ಮಾತನಾಡುತ್ತಾ, ಇಂದಿನ ನಮ್ಮ ಸಾಧಕ ವಿದ್ಯಾರ್ಥಿಗಳ ಸಾಧನೆ ಕಿರಿಯ ವಿದ್ಯಾರ್ಥಿಗಳಿಗೆ ಪ್ರೇರಣೆ. ಸಾಧನೆ ಎಂಬುದು ಕೇವಲ ಪರಿಶ್ರಮ, ಪ್ರಯತ್ನದಿಂದ ಮಾತ್ರ ಬರುವುದಲ್ಲ. ಅದು ಹಲವರ ಪ್ರಾರ್ಥನೆ, ಹಾರೈಕೆಯ ಪ್ರತಿಫಲ. ವಿದ್ಯಾರ್ಥಿಗಳು ತಮ್ಮ ಸಾಧನೆಗೆ ಬೆನ್ನೆಲುಬಾಗಿ ನಿಂತಿರುವ ತಂದೆ ತಾಯಿ ಹಾಗೂ ಶಿಕ್ಷಕರು ನಿಜವಾದ ಆದರ್ಶಪ್ರಾಯರು. ಅವರನ್ನು ಸದಾ ಗೌರವಿಸಬೇಕು.

ಮುಂದಿನ ಜೀವನದಲ್ಲಿ ತಾವೆಲ್ಲರೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಬಹುದು. ಆದರೆ ಕೆನರಾ ಸಂಸ್ಥೆ ನಿಮ್ಮನ್ನು ಎಂದಿಗೂ ಸ್ವಾಗತಿಸಲು ಸಜ್ಜಾಗಿರುತ್ತದೆ. ದೇಶ ವಿದೇಶಗಳಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅನೇಕ ಹಿರಿಯ ಸಾಧಕರು ನಮ್ಮ ಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆದಿದ್ದಾರೆ ಎಂಬುದೇ ನಮ್ಮ ದೊಡ್ಡ ಹೆಮ್ಮೆ. ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ಬದುಕಿನ ಕಷ್ಟಗಳನ್ನು ಮೆಟ್ಟಿನಿಲ್ಲುವ ಆಲೋಚನೆಗಳನ್ನು ಬೆಳೆಸಿಕೊಳ್ಳಬೇಕು. ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳುತ್ತಾ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಿಂದಿನ ಪರಿಶ್ರಮ ಹಾಗೂ ಶಾಲೆ, ಶಿಕ್ಷಕರು ನೀಡಿದ ಪ್ರೋತ್ಸಾಹ, ತಮ್ಮ ಮುಂದಿನ ಕನಸು ಇತ್ಯಾದಿ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕೆನರಾ ವಿಕಾಸ ಪದವಿಪೂರ್ವ ಕಾಲೇಜಿನ ಸಂಯೋಜಕರಾದ ಬಸ್ತಿ ಪುರುಷೋತ್ತಮ ಶೆಣೈ, ಕೆನರಾ ಪದವಿಪೂರ್ವ ಕಾಲೇಜಿನ ಸಂಚಾಲಕ ಗೋಪಾಲಕೃಷ್ಣ ಶೆಣೈ, ಕೆನರಾ ಪ್ರೌಢಶಾಲೆ ಉರ್ವ ಇದರ ಸಂಚಾಲಕರಾದ ಯೋಗೇಶ್ ಕಾಮತ್, ಕೆನರಾ ಸಿ.ಬಿ.ಎಸ್.ಇ ಮುಖ್ಯೋಪಾಧ್ಯಾಯಿನಿ ಸುರೇಖಾ ಭಟ್, ಕೆನರಾ ಪ್ರೌಢಶಾಲೆ ಉರ್ವ ಇದರ ಮುಖ್ಯೋಪಾಧ್ಯಾಯಿನಿ ಇಂದುಮತಿ, ಕೆನರಾ ಪ್ರೌಢಶಾಲೆ ಡೊಂಗರಕೇರಿ ಇಲ್ಲಿಯ ಮುಖ್ಯೋಪಾಧ್ಯಾಯಿನಿ ಅರುಣಾ ಕುಮಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಉಜ್ವಲ್ ಮಲ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!