Saturday, June 13, 2026
Saturday, June 13, 2026

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

Date:

ಬೆಂಗಳೂರು, ಜೂನ್ 18: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಭಾನುವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಕೆಲವೆಡೆ ವೆಬ್ ಸೈಟ್ ಸರ್ವರ್ ಡೌನ್ ಆಗಿದ್ದು ಸಾರ್ವಜನಿಕರು ಅರ್ಜಿ ಸಲ್ಲಿಸಲು ಪರದಾಡುತ್ತಿದ್ದಾರೆ. ಬೆಳಗ್ಗೆಯಿಂದ ಗೃಹಶಕ್ತಿ ಯೋಜನೆಗೆ ಅರ್ಜಿ ಸಲ್ಲಿಸುವ ವೆಬ್ ಸೈಟ್ ಸರಿಯಾಗಿ ಕಾರ್ಯನಿರ್ವಹಿಸುತ್ತಿತ್ತು, ಆದರೆ 10 ಗಂಟೆಯ ನಂತರ ಸರ್ವರ್ ಡೌನ್ ಆಗಿದೆ.

ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲೂ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಗ್ರಾಮ ಪಂಚಾಯತ್, ನಾಡ ಕಚೇರಿ, ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ಕೂಡ ಈ ಯೋಜನೆಗೆ ನೋಂದಾವಣಿ ಮಾಡಿಕೊಳ್ಳಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!