Home ಸುದ್ಧಿಗಳು ರಾಜ್ಯ 10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರದಿಂದ ಇಳಿಯಿರಿ: ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ...

10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರದಿಂದ ಇಳಿಯಿರಿ: ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

238
0

ದಾವಣಗೆರೆ, ಜೂ. 22: ಕಾಂಗ್ರೆಸ್ ಸರ್ಕಾರ ಚುನಾವಣೆಯ ಸಂದರ್ಭದಲ್ಲಿ ಭರವಸೆ ಕೊಟ್ಟಂತೆ ಐದು ಯೋಜನೆಗಳನ್ನು ಅನುಷ್ಠಾನ ಮಾಡಲು ಆಗದೇ ಇದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್​​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರನ್ನು ಮರಳು ಮಾಡಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ದಿನಕ್ಕೊಂದು ನಾಟಕವಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೇಳಿ ಭರವಸೆ ಕೊಟ್ಟಿದ್ರಾ? ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಅಂತ ಅವರೇ ಭರವಸೆ ಕೊಟ್ಟಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ರಾಜ್ಯದ ಜನರಿಗೆ 5 ಕೆಜಿ ಅಕ್ಕಿ‌ ಕೊಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ ಹಾಗೆ 10 ಕೆಜಿ ಅಕ್ಕಿ ಕೊಡಬೇಕು. ಕೊಡಲು ಆಗದಿದ್ದರೆ ಅಧಿಕಾರದಿಂದ ಇಳಿಯಲಿ ಎಂದು ಬಿ.ಎಸ್.ವೈ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.