Wednesday, January 22, 2025
Wednesday, January 22, 2025

ಶಾಸಕರ ಅಮಾನತು ಮೂಲಕ ಕಾಂಗ್ರೆಸ್ ಸರಕಾರದ ಸರ್ವಾಧಿಕಾರಿ ಧೋರಣೆ ಬಯಲು: ಯಶ್ಪಾಲ್ ಸುವರ್ಣ ಆಕ್ರೋಶ

ಶಾಸಕರ ಅಮಾನತು ಮೂಲಕ ಕಾಂಗ್ರೆಸ್ ಸರಕಾರದ ಸರ್ವಾಧಿಕಾರಿ ಧೋರಣೆ ಬಯಲು: ಯಶ್ಪಾಲ್ ಸುವರ್ಣ ಆಕ್ರೋಶ

Date:

ಬೆಂಗಳೂರು, ಜು. 19: ನಿನ್ನೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ವಿರೋಧಿ ಪಕ್ಷಗಳ ರಾಜಕೀಯ ಸಭೆಗೆ ಆಗಮಿಸಿದ ಪಕ್ಷಗಳ ನಾಯಕರಿಗೆ ನಿಯಮಬಾಹಿರವಾಗಿ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡ ಸರ್ಕಾರದ ನಡೆಯನ್ನು ಖಂಡಿಸಿ, ಬಿಜೆಪಿ ಶಾಸಕರು ಸದನದಲ್ಲಿ ನಡೆಸಿದ ಪ್ರತಿಭಟನೆಯನ್ನು ನೆಪವಾಗಿಸಿ ಅಮಾನತುಗೊಳಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ಧೋರಣೆ ಬಯಲಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನರ್ಹಗೊಂಡಿರುವ ಸಂಸದ ರಾಹುಲ್ ಗಾಂಧಿ, ಕೋರ್ಟ್ ಜಾಮೀನಿನ ಮೇಲೆ ಹೊರಗಡೆ ಇರುವ ಲಾಲು ಪ್ರಸಾದ್ ಯಾದವ್ ಹಾಗೂ ತಮ್ಮ ರಾಜ್ಯಗಳಲ್ಲಿಯೇ ಮೂಲೆಗುಂಪಾಗಿರುವ ನಾಯಕರುಗಳಿಗೆ ಶಿಷ್ಟಾಚಾರದ ಹೆಸರಿನಲ್ಲಿ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಕಾರ್ಯಕ್ರಮಗಳಿಗೆ ಬಳಸಿಕೊಳ್ಳುವ ಮೂಲಕ ಕಾನೂನು ಮೀರಿ ವರ್ತಿಸಿದ್ದು ಈ ನಡೆಯನ್ನು ಖಂಡಿಸಿದ ಶಾಸಕರನ್ನು ಅಮಾನತುಗೊಳಿಸುವ ಮೂಲಕ ಸಭಾಪತಿಗಳು ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಂತೆ ಸದನದ ಗೌರವವನ್ನು ಅಪವಿತ್ರಗೊಳಿಸಿದ್ದಾರೆ.

ಆಡಳಿತ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿರುವ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ರಾಜಕೀಯ ಉದ್ದೇಶಕ್ಕಾಗಿ ಬಳಸುವ ಮೂಲಕ ಐಎಎಸ್ ಹುದ್ದೆಯ ಘನತೆಗೆ ಚ್ಯುತಿ ತಂದಿದೆ. ರಾಜ್ಯದ ಜನರ ತೆರಿಗೆಯ ಹಣವನ್ನು ತಮ್ಮ ರಾಜಕೀಯ ಸ್ವೇಚ್ಛಾಚಾರಕ್ಕಾಗಿ ಫೋನು ಮಾಡುತ್ತಿದ್ದು ಈ ಮೂಲಕ ಮುಖ್ಯಮಂತ್ರಿಗಳು ತಮ್ಮ ಹೈಕಮಾಂಡ್ ಸೋನಿಯಾ ಗಾಂಧಿಯವರನ್ನು ಮೆಚ್ಚಿಸಲು ಹೊರಟಂತಿದೆ. ಅಧಿಕಾರದ ಮದದಲ್ಲಿರುವ ಕಾಂಗ್ರೆಸ್ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಸಂವಿಧಾನ ಬಾಹಿರವಾಗಿ ಶಾಸಕರನ್ನು ಅಮಾನತುಗೊಳಿಸಿ ತನ್ನ ತಪ್ಪನ್ನು ಮರೆಮಾಚುವ ವಿಫಲ ಪ್ರಯತ್ನಕ್ಕೆ ಕೈ ಹಾಕಿದ್ದು ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...

‘ಬೃಂದಾವನದಿಂದ ಉಡುಪಿಯೆಡೆ’ ಸಾಂಝಿ ಕಲಾಕೃತಿಗಳ ಪ್ರದರ್ಶನ

ಉಡುಪಿ, ಜ.22: ಭಾವನಾ ಫೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...
error: Content is protected !!