ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಈ ಬಾರಿಯ ಸಮ್ಮೇಳನ ಹಾವೇರಿಯಲ್ಲಿ 2023ರ ಜನವರಿ 6, 7 ಮತ್ತು 8ರಂದು ನಡೆಯಲಿದೆ. ಸಮ್ಮೇಳನದ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುನಿಲ್ ಕುಮಾರ್, ಸಮ್ಮೇಳನಕ್ಕೂ ಮುನ್ನ 45 ದಿನಗಳ ಕಾಲ ಕನ್ನಡ ರಥ ರಾಜ್ಯಾದ್ಯಂತ ಮೆರವಣಿಗೆ ನಡೆಸಲಿದ್ದು, ಸಮ್ಮೇಳನವನ್ನು ಅಚ್ಚುಕಟ್ಟಾಗಿ ಯಶಸ್ವಿಗೊಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದೇವೆ.
ರಾಜ್ಯದ 86 ಜನ ಸಾಧಕರಿಗೆ ಸಮ್ಮೇಳನದಲ್ಲಿ ಸನ್ಮಾನಿಸಲು ತೀರ್ಮಾನಿಸಿದ್ದು, ಸಮ್ಮೇಳನಕ್ಕಾಗಿ 20 ಕ್ಕೂ ಹೆಚ್ಚು ಉಪಸಮಿತಿಗಳನ್ನು ರಚಿಸಲಾಗುವುದು. ಸಮ್ಮೇಳನದಲ್ಲಿ 8 ರಿಂದ 10ಲಕ್ಷ ಜನ ಭಾಗವಹಿಸಬಹುದೆಂದು ಅಂದಾಜಿಸಲಾಗಿದ್ದು, ಸಮ್ಮೇಳನವನ್ನು ಯಶಸ್ವಿಗೊಳಿಸಲು ಇಂದಿನಿಂದಲೇ ಕಾರ್ಯಪ್ರವೃತ್ತರಾಗುತ್ತೇವೆ ಎಂದು ಹೇಳಿದ್ದಾರೆ.