Saturday, September 21, 2024
Saturday, September 21, 2024

ನಿಯಂತ್ರಣ ತಪ್ಪಿದ ಬೈಕ್- ಕೆರೆಗೆ ಬಿದ್ದ ದಂಪತಿ

ನಿಯಂತ್ರಣ ತಪ್ಪಿದ ಬೈಕ್- ಕೆರೆಗೆ ಬಿದ್ದ ದಂಪತಿ

Date:

ಮೈಸೂರು: ಬೈಕ್ ನಿಯಂತ್ರಣ ತಪ್ಪಿ ದಂಪತಿ ಕೆರೆಗೆ ಬಿದ್ದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕೂಗಲೂರು ಗ್ರಾಮದಲ್ಲಿ ನಡೆದಿದೆ. ಅಪಘಾತದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯುಮುನಾ (22) ಮೃತ ಮಹಿಳೆ. ಮೃತ ಮಹಿಳೆಯ ಪತಿ ದಕ್ಷಿಣಾಮೂರ್ತಿ ಅಲಿಯಾಸ್ ನವೀನ್ ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ದಕ್ಷಿಣಾಮೂರ್ತಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂಜನಗೂಡಿನ ದೇವನೂರು ಗ್ರಾಮದವರಾದ ದಕ್ಷಿಣಾ ಮೂರ್ತಿ ಪತ್ನಿ ಯಮುನಾ ಜೊತೆ ಬೈಕ್ ನಲ್ಲಿ ಸಿದ್ದಯ್ಯನಹುಂಡಿ ಗ್ರಾಮಕ್ಕೆ ನಂಜನಗೂಡು ಮಾರ್ಗವಾಗಿ ತೆರಳುವ ವೇಳೆ ಈ ಅವಘಡ ಸಂಭವಿಸಿದೆ.

ಬೈಕ್ ಮುಂದುಗಡೆ ಲಗೇಜ್ ಇಟ್ಟುಕೊಂಡಿದ್ದ ಕಾರಣ ಬೈಕ್ ಹ್ಯಾಂಡಲ್ ತಿರುಗಿಸಲು ಅಸಾಧ್ಯವಾದ ಕಾರಣ ಕೂಗಲೂರು ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳಿಗೆ ಸ್ಥಳೀಯರು ಮಾಹಿತಿ ನೀಡಿ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿ ಯಮುನಾ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!